
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಬಾಳೆಬೈಲು ಎಂಬಲ್ಲಿನ ನಾಗರಿಕರು ರಸ್ತೆ ದುರವಸ್ಥೆಯ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ನಿರ್ಧರಿಸಿ ಏ.20 ರಂದು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಿರುವುದಾಗಿ ತಿಳಿದುಬಂದಿದೆ.
ಕಲ್ಮಕಾರು ಶಕ್ತಿನಗರದಿಂದ ಬಾಳೆಬೈಲು ಭಾಗಕ್ಕೆ ತೆರಳುವ ರಸ್ತೆಯು ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು, ಈ ಭಾಗದ ಸಾರ್ವಜನಿಕರು ಹಾಗೂ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ತೆರಳಲು ತುಂಬಾ ಕಷ್ಟಪಡುತ್ತಿದ್ದು, ಈ ಬಗ್ಗೆ ಶಾಸಕರಿಗೆ, ಸಂಸದರಿಗೆ ಸೇರಿದಂತೆ ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಈ ಭಾಗದ ನಾಗರಿಕರು ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
