
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಹಾಲು ಉತ್ಪಾದಕ ಸಂಘ ಪ್ರತಿನಿಧಿಗಳಿಗೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಗೆ ಇದೇ ಶನಿವಾರ ಚುನಾವಣೆ ನಡೆಯಲಿದ್ದು ಪುತ್ತೂರು ವಿಭಾಗದಿಂದ ನಮ್ಮ ಅಭ್ಯರ್ಥಿಯಾಗಿ ಚಂದ್ರಶೇಖರ ರಾವ್,ಎಸ್.ಬಿ ಜಯರಾಮ್ ರೈ, ಹೆಚ್ ಪ್ರಭಾಕರ್, ಭರತ್ ನೆಕ್ರಾಜೆ,ಮಹಿಳಾ ಸ್ಥಾನದಿಂದ ಸವಿತಾ ಎಸ್ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಯಸ್ ಯಡಿಯೂರಪ್ಪ ಸಮಯದಲ್ಲಿ ಹೈನುಗಾರರ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಹಾಲು ಉತ್ಪಾದಕರ ಪರವಾಗಿ ಒಳ್ಳೆಯ ಕಾರ್ಯಕ್ರಮವನ್ನು ರೂಪಿಸಿದ್ದನ್ನು ಮರೆಯುವಂತಿಲ್ಲ ಈ ಬಾರಿ ಯ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
