
ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ಹರಿಹರ ಹಾಗೂ ಕೊಲ್ಲಮೊಗ್ರು ವಲಯದ ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಏ.22 ರಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ನಡೆಯಿತು.
ಜಿಲ್ಲಾ ಕೇಂದ್ರ ಬ್ಯಾಂಕ್ ವಲಯ ಮೇಲ್ವಿಚಾರಕರಾದ ಮನೋಜ್ ಮಾಣಿಬೈಲು ರವರು ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ, ಸುಳ್ಯ ತಾಲೂಕು ಮೇಲ್ವಿಚಾರಕರಾದ ಶ್ರೀಧರ ಮಾಣಿಮರ್ದು, ವಲಯ ಪ್ರೇರಕರಾದ ಚಂದ್ರಕಲಾ ಹಾಗೂ ನವೋದಯ ಸ್ವ-ಸಹಾಯ ಪದಾಧಿಕಾರಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)