
ಸಮಾಜದಲ್ಲಿ ಮುಖ್ಯ ವ್ಯಕ್ತಿಗಳಾಗಿ ಬಾಳುವುದನ್ನು ಕಲಿಯಬೇಕು. ವಿದ್ಯಾವಂತರಾಗಿ ಯಾವುದಾದರೂ ಹುದ್ದೆಯನ್ನು ಗಳಿಸುವುದರೊಂದಿಗೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಆ ಮೂಲಕ ಸಮಾಜ ನಮ್ಮನ್ನು ಗುರುತಿಸುವಂತಾಗಬೇಕು. ಯುವಜನರು ಯಾವುದೇ ಸಂಧಿಗ್ದತೆ ಯಲ್ಲೂ ಆತ್ಮಹತ್ಯೆ ಯಂತಹ ದುಸ್ಸಾಹಾಸಕ್ಕೆ ಕೈ ಹಾಕದೆ ಸ್ವಾಭಿಮಾನದ ಬದುಕು ರೂಪಿಸುವಲ್ಲಿ ಶ್ರಮಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಏ -25ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ವಾರ್ಷಿಕೋತ್ಸವ ಸಮಾರಂಭ ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿಯ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ.ವಿಜಯ ಸರಸ್ವತಿ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಲತಾ ಎಂ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕಾಲೇಜಿನ ಐ.ಕ್ಯೂ.ಎ.ಸಿ ವಿಭಾಗದ ಸಂಚಾಲಕರಾದ ಡಾ ಪ್ರೀತಿ ಕೆ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ ಉದಯ ಶಂಕರ ಹೆಚ್, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊ ಪುಷ್ಪರಾಜ್ ಕೆ ವಿದ್ಯಾರ್ಥಿ ಕಾರ್ಯದರ್ಶಿಗಳಾದ ಕೃಷ್ಣ ಪ್ರದೀಪ್ ಡಿ ಎಸ್, ಶ್ರುತಿ ಆರ್ ಎಲ್, ದೀಕ್ಷಿತ, ಐಶ್ವರ್ಯ ಫಿಲಿಪ್ಸ್, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮತ್ತು ಕಾಲೇಜಿನಿಂದ ವರ್ಗಾವಣೆ ಗೊಂಡು ಬೇರೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ ಜಯಶ್ರೀ ಕೆ, ಹಾಗೂ ಪ್ರೊ ಸುರೇಖಾ ಹೆಚ್ ಇವರುಗಳನ್ನು ಸನ್ಮಾನಿಸಲಾಯಿತು. ಮತ್ತು ಪಿ ಹೆಚ್ ಡಿ ಪದವಿ ಪಡೆದ ಕಾಲೇಜಿನ ಉಪನ್ಯಾಸಕರಾದ ಡಾ ಶೈಲಜಾ ಎನ್ ಆರ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಂತರ ಕಾಲೇಜಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭ ಗೊಂಡಿತು. ಕಾರ್ಯಕ್ರಮದಲ್ಲಿ ಐ ಕ್ಯೂ ಏ ಸಿ ಸಂಚಾಲಕರಾದ ಡಾ ಪ್ರೀತಿ ಕೆ ರಾವ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಉದಯ ಶಂಕರ್ ಹೆಚ್ ವಂದಿಸಿದರು. ಇತಿಹಾಸ ಉಪನ್ಯಾಸಕರಾದ ಶಿವಾನಂದ ಜಿ ಕಾರ್ಯಕ್ರಮ ನಿರೂಪಿಸಿದರು.