
ಮಂಗಳೂರಿನ ಬಜಪೆ ಸಮೀಪ ಮೆ.01 ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್ ಗೆ ಕರೆ ನೀಡಿದೆ.
ಈ ಬಗ್ಗೆ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಇಂದು ಸ್ವಯಂ ಪ್ರೇರಿತ ಜಿಲ್ಲಾ ಬಂದ್ಗೆ ವಿ ಹೆಚ್ ಪಿ ಕರೆ ನೀಡಿದೆ ಎಂದು ತಿಳಿಸಿದ್ದಾರೆ.
ಕೊಲೆಯ ಬಳಿಕ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 2ರ ಬೆಳಗ್ಗೆ 6 ಗಂಟೆಯಿಂದ ಮೇ 6ರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
