
ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಎನ್ ಟಿ ಹೊನ್ನಪ್ಪ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಶೆಟ್ಟಿ, ಯವರು ಎನ್ ಟಿ ಹೊನ್ನಪ್ಪ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಖೆಯ ಪ್ರಬಂಧಕರಾದ ಸಂತೋಷ್ ಪಿ, ಸೀನಿಯರ್ ಮ್ಯಾನೇಜರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.