

ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಉಗ್ರರ ವಿರುದ್ಧ “ಆಪರೇಷನ್ ಸಿಂಧೂರ್” ಎಂಬ ಹೆಸರಿನಡಿ ಕಾರ್ಯಾಚರಣೆ ನಿರತವಾಗಿರುವ ಭಾರತೀಯ ಸೈನಿಕರಿಗೆ ಶ್ರೀ ಬಸವೇಶ್ವರ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀ ದೇವಳದಲ್ಲಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಕುಲ್ಕುಂದ ಇವರ ವತಿಯಿಂದ ಶ್ರೀ ದೇವರಿಗೆ ರುದ್ರಪಾರಾಯಣ ಸಹಿತ ಮಹಾಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಕುಲ್ಕುಂದ ಇದರ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.