
ಪೆರುವಾಜೆ :ಪಾಕಿಸ್ತಾನದ ಉಗ್ರರ ವಿರುದ್ಧ ಸಿಂದೂರ ಆಪರೇಷನ್ ಹೆಸರಿನಡಿ ಕಾರ್ಯಾಚರಣೆ ನಿರತ ಭಾರತೀಯ ಸೈನಿಕರಿಗೆ ಒಳಿತು ಉಂಟು ಮಾಡುವ ನಿಟ್ಟಿನಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ರಾಜ್ಯ ಸರಕಾರದ ಮುಜರಾಯಿ ಇಲಾಖಾ ಸಚಿವರ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದಂತೆ ಶ್ರೀ ಕ್ಷೇತ್ರದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಶ್ರೀ ಜಲದುರ್ಗಾದೇವಿ ದೇವಾಲಯದ ಆಡಳಿತಾಧಿಕಾರಿ ಪ್ರವೀಣ್ ಕುಮಾರ್ ,ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮಾಜಿ ಸದಸ್ಯರಾದ ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ ಪೆರುವಾಜೆ, ನಾರಾಯಣ ಕೊಂಡೆಪ್ಪಾಡಿ, ದಾಮೋದರ ನಾಯ್ಕ ಪೆಲತ್ತಡ್ಕ, ಮಾಜಿ ಆಡಳಿತಾಧಿಕಾರಿ ಪದ್ಮನಾಭ ನೆಟ್ಟಾರು, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.