- Monday
- May 12th, 2025

ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರ ಅಂತಿಮ ಆದೇಶ ಮಾಡಿದೆ. ಮೇ.12ರಂದು ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಗಿ ಹರೀಶ್ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಮೇ.11ರಂದು ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಅಧ್ಯಕ್ಷರನ್ನಾಗಿಸುವುದೆಂದು ತೀರ್ಮಾನವಾಗಿತ್ತು. ಆದರೇ ಮೇ.12...

ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಎಂಬುದನ್ನು ಪತ್ತೆ ಹಚ್ಚಲಾಗಿದ್ದು ಗೀತಾ (51) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆಯು ಕಳೆದ...

ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅರ್ಜಿ ಆಹ್ವಾನಿಸಿ ಒಂದು ವರ್ಷ ಕಳೆದರೂ ಸಮಿತಿಯ ಸದಸ್ಯರ ನೇಮಕ ವಿಳಂಬ ಮಾಡಿರುವುದು, ಪಕ್ಷದ ಕಾರ್ಯಕರ್ತರಿಗೆ ಬೇಸರ ತಂದಿದೆ. ಆದರೆ ಇತ್ತೀಚೆಗೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರ ಹೆಸರನ್ನು ಸೇರಿಸಿಕೊಂಡು ಸಮಿತಿಯ ಪಟ್ಟಿ ತಯಾರಾಗಿತ್ತು. ಇದು ಒಬ್ಬ...

ವಸಡು ನಮ್ಮ ಹಲ್ಲಿನ ಸುತ್ತ ಇರುವ ದಂತಾದಾರ ಎಲುಬುಗಳ ಮೇಲ್ಪದರವನ್ನು ಮುಚ್ಚಿರುತ್ತದೆ. ಗಟ್ಟಿಯಾದ ಹಲ್ಲುಗಳ ದೃಢತೆಗೆ ಗುಲಾಬಿ ಬಣ್ಣದ ವಸಡಿನ ಸಹಕಾರ ಅತೀ ಅಗತ್ಯ. ಆರೋಗ್ಯವಂಥ ವಸಡು ನಸುಗುಲಾಬಿ ಬಣ್ಣ ಹೊಂದಿದ್ದು, ಮುಟ್ಟಿದಾಗ ಅಥವಾ ಹಲ್ಲುಜ್ಜುವಾಗ ರಕ್ತಸ್ರಾವವಾಗುವುದಿಲ್ಲ. ವಸಡಿನ ಬಣ್ಣ ಕೆಂಪಗಾಗಿ, ವಸಡಿನಲ್ಲಿ ಹಲ್ಲುಜ್ಜುವಾಗ ರಕ್ತ ಒಸರಲು ಆರಂಭವಾದಲ್ಲಿ, ಅದು ವಸಡಿನ ಅನಾರೋಗ್ಯದ ಮುಖ್ಯ ಲಕ್ಷಣವಾಗಿರುತ್ತದೆ....

ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶವು ಮೇ.17ರಂದು ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾಹಿತಿ ನೀಡಿದ್ದಾರೆ. ಮೇ.10ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ...

ಸುಳ್ಯ:ಸುಳ್ಳು ಮಾಹಿತಿಗಳು, ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನ ನೂತನ ಪದಾಧಿಕಾರಿಗಳ...