
ಕಲ್ಮಡ್ಕ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಕಲ್ಮಡ್ಕ ಗ್ರಾಮ ಪಂಚಾಯತ್ ಸಹಭಾಗಿತ್ವ ವಾರ್ಷಿಕ ಕ್ರಿಯಾಯೋಜನೆ(GPDP) ತಯಾರಿಸುವ ಕುರಿತಾಗಿ ವಿಶೇಷ ಸಭೆಯನ್ನು ಮೇ. 13ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಿತು. ಸಹಭಾಗಿತ್ವ ವಾರ್ಷಿಕ(GPDP) ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಉಪಾಧ್ಯಕ್ಷರಾದ ಮೋಹಿನಿ ಎಂ, ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ಬೊಳಿಯೂರು, ಹರೀಶ್ ಮಾಳಪ್ಪಮಕ್ಕಿ,ಮೀನಾಕ್ಷಿ ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.