
ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ 25ನೇ ವರ್ಷದ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರದ ಸಮಾರೋಪ ಸಮಾರಂಭ ಮತ್ತು ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.18ರಂದು ಅಪರಾಹ್ನ3ರಿಂದ ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ತನ್ನದೇ ಆದ ವಿಶಿಷ್ಟ ಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‌ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರ ಇದೀಗ ಇಪ್ಪತ್ತೈದನೇ ವರ್ಷವನ್ನು ಪೂರ್ತಿ ಮಾಡಿದೆ.
ಸಂಪೂರ್ಣ ಉಚಿತವಾಗಿ ವೇದ-ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಸನ, ವಸನ, ವಸತಿ, ಪಠ್ಯ ಪುಸ್ತಕಗಳೂ, ವ್ಯಾಸಪೀಠ ಇತ್ಯಾದಿಗಳನ್ನು ನೀಡಿ ಸಂಪೂರ್ಣ ಉಚಿತವಾಗಿ ನಡೆಸಿಕೊಂಡು ಬರಲಾಗುತ್ತಿದೆ- ಡಾ.ಆರ್.ಕೆ.ನಾಯರ್, ಕಾಂಚನ ಈಶ್ವರ ಭಟ್,ವೆಂಕಟೇಶ ಶಾಸ್ತ್ರಿ
ಮೇ.18ಕ್ಕೆ ನಡೆಯುವ ಸಮಾಪನ ಸಮಾರಂಭದಲ್ಲಿ ಕೇಶವಸ್ಕೃತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆರ್ಶೀವಚನ ಮಾಡುವರು. ಬೆಂಗಳೂರಿನ ಖ್ಯಾತ ಆರ್ಯುವೇದ ವೈದ್ಯರಾದ ಡಾ. ಗಿರಿಧರ ಕಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಾಲು ಧ.ಮಂ.ಕಾಲೇಜಿನ ನಿವೃತ್ತ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು ಅಭಿನಂದನಾ ಭಟಷಣ ಮಾಡಲಿದ್ದಾರೆ. ಸುಳ್ಯ ಶಿವಕೃಪಾ ಕಲಾಮಂದಿರದ ಮಾಲಕ ಹರೀಶ್ ಕುಮಾರ್ ಕೆ. ಇವರು ಮುಖ್ಯ ಅಭ್ಯಾಗತರಾಗಿ ಶುಭಾಶಂಸನೆ ಮಾಡಲಿದ್ದಾರೆ. ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದು ಶುಭ ಹಾರೈಸಲಿದ್ದಾರೆ.
ಕೇಶವ ಸ್ಮೃತಿ ಪ್ರಶಸ್ತಿ:
ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಅವರಿಗೆ ಸಾಧನಾ ಶ್ರೀ ಪ್ರಶಸ್ತಿ, ಅರಂಬೂರು ಕಾಂಚಿ ಕಾಮಕೋಟಿ ವೇದ ವಿದ್ಯಾಲಯದ ವೇದ ಅಧ್ಯಾಪಕರಾದ ವೆಂಕಟೇಶ ಶಾಸ್ತ್ರಿ ಅವರಿಗೆ ವೇದ ಸ್ಮೃತಿ ಹಾಗೂ ಸಂಗೀತ ಶಿಕ್ಷಕ ವಿದ್ವಾನ್ ಕಾಂಚನ ಈಶ್ವರ ಭಟ್ ಅವರಿಗೆ ಕಲಾಸ್ಕೃತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪುರೋಹಿತ ನಾಗರಾಜ ಭಟ್ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಗುರುಗಳಾದ ವೇ.ಮೂ. ಸುದರ್ಶನ್ ಭಟ್ ಉಜಿರೆ, ಹಿರಿಯ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಬಲರಾಮ ಭಟ್ ಶಿವನಿವಾಸ, ಶಿಬಿರದ ಪ್ರಬಂಧಕಿ ಯಶಸ್ವಿ ಮುಂಡಕಜೆ ಉಪಸ್ಥಿತರಿದ್ದರು.