Ad Widget

ಮೇ.23 : ಸುಳ್ಯದಲ್ಲಿ ಜೇನು ಸೊಸೈಟಿಯ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೇಟ್ ಲೋಕಾರ್ಪಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಮನ


ಆಡಳಿತ ಮಂಡಳಿ

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ನಡೆಯಲಿದೆ.

. . . . . . . . .

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಎನ್‌.ಚೆಲುವರಾಯ ಸ್ವಾಮಿ ಸಂಸ್ಕರಣಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ರತ್ನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಶಾಸಕಿ ಕು.ಭಾಗೀರಥಿ ಮುರುಳ್ಯ ನಾಮಫಲಕ ಅನಾವರಣ ಮಾಡಲಿದ್ದಾರೆ. ಉದ್ಘಾಟನೆಯ ಬಳಿಕ ಸುಳ್ಯದ ಶಾಸ್ತ್ರೀ ವೃತ್ತದಲ್ಲಿರುವ ಅಮೃತ ಭವನದಲ್ಲಿ  ಸಭಾಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಸಹಕಾರ ರತ್ನ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಚಂದ್ರ ಕೋಲ್ಟಾರು ವಹಿಸಲಿದ್ದಾರೆ.

. . . . . . .

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ ಉಪಸ್ಥಿತರಿರಿರಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading