
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಕಾರಣ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮೇ.21 ರಿಂದ 23 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(ವರದಿ : ಉಲ್ಲಾಸ್ ಕಜ್ಜೋಡಿ)