- Wednesday
- May 28th, 2025
ಕಲ್ಲುಗುಂಡಿ ಕಡಪಾಲದ ಸಮೀಪ ಕರೆಂಟ್ ಲೈನ್ ಸರಿ ಮಾಡುತ್ತಿದ್ದ ಸಂದರ್ಭದಲ್ಲಿ ಲೈನ್ ಮ್ಯಾನ್ ನವೀನ್ ಎಂಬವರಿಗೆ ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ. ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದ ನವೀನ್ ಅವರನ್ನು ಸ್ಥಳೀಯರು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ನಿಂತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು ಅಪಾಯ ಸಂಭವಿಸುವ ಮೊದಲು ತೆರವುಗೊಳಿಸಲು ನಾಗರಿಕರು ಒತ್ತಾಯಿಸಿದ್ದಾರೆ.

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ವಾಣಿಜ್ಯ ವಿಭಾಗದ ವಿದ್ಯಾರ್ಥಿ ಯಶಸ್ವಿ ಎರ್ದಡ್ಕ ಇವರು ಫಲಿತಾಂಶ ಉತ್ತಮಪಡಿಸುವ ಸಲುವಾಗಿ ಮರು ಪರೀಕ್ಷೆ ಬರೆದಿದ್ದು 21 ಅಂಕ ಹೆಚ್ಚುವರಿ ಪಡೆದುಕೊಂಡಿರುತ್ತಾರೆ. ಮರು ಪರೀಕ್ಷೆಯಲ್ಲಿ 522 ಡಿಸ್ಟಿಂಕ್ಷನ್ ಅಂಕ ಪಡೆದದಿರುತ್ತಾರೆ. ಇವರು ಮಾಧವ ಎರ್ದಡ್ಕ ಹಾಗೂ ರೂಪ ಎರ್ದಡ್ಕ ರವರ...

ಇದೀಗ ಮಳೆಗಾಲ ಪ್ರಾರಂಭವಾಗಿದ್ದು, ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಇನ್ನೇನು ಕೆಲವೇ ದಿನಗಳಲ್ಲಿ ನದಿ-ಜಲಪಾತ, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯಲು ಪ್ರಾರಂಭಿಸುತ್ತವೆ.ಮನುಷ್ಯ ಸೇರಿದಂತೆ ಪ್ರಾಣಿ-ಪಕ್ಷಿ, ಜೀವಸಂಕುಲದ ಉಳಿವಿಗೆ ಮಳೆ ಅತ್ಯಗತ್ಯ. ಆದರೆ ಮನುಷ್ಯರಾದ ನಾವುಗಳು ಇಂದು ನಮ್ಮ ಉಳಿವಿಗಾಗಿ ಸುರಿಯುತ್ತಿರುವ ಈ ಮಳೆಯಲ್ಲಿ ಹುಚ್ಚಾಟ ಮಾಡಿ ನಮ್ಮ ಪ್ರಾಣಕ್ಕೆ ನಾವೇ ಕುತ್ತು...