
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಮದ್ಯಾಹ್ನ ಮತ್ತು ರಾತ್ರಿ ಅನ್ನದಾಸೋಹ ಭೋಜನ ಪ್ರಸಾದದ ವ್ಯವಸ್ಥೆ ಜಾರಿಯಲ್ಲಿದ್ದು, ಇದೀಗ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಿಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆಯನ್ನು ಮೇ.30 ರಂದು ಪೂರ್ವಾಹ್ನ 8:00 ಗಂಟೆಗೆ ವಿದ್ಯುಕ್ತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)
