Ad Widget

ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ, ಕಾರ್ಯದರ್ಶಿಗಳಾಗಿ ಸತೀಶ್ ಟಿ ಎನ್ ಆಯ್ಕೆ

. . . . . . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

. . . . . . .

ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ತಿನ ಧ್ಯೆಯೋದ್ದೇಶಗಳು ಮತ್ತು ಸುಳ್ಯ ತಾಲೂಕು ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಂಪೂರ್ಣವಾದ ವರದಿಯನ್ನು ತಯಾರಿಸಿ ಮಾಹಿತಿಗಳನ್ನು ತಿಳಿಸಿದರು.
ಗುತ್ತಿಗಾರು ವಲಯ ಮೇಲ್ವಿಚಾರಕರಾದ ರಾಜೇಶ್ ರವರು ಸರ್ವರನ್ನು ಸ್ವಾಗತಿಸಿದರು.
ಶ್ರೀಮತಿ ಕುಸುಮ ಬಾಳುಗೋಡು ರವರು ಪ್ರಾರ್ಥನೆ ಮಾಡಿದರು.

ತಾಲೂಕು ಕಾರ್ಯದರ್ಶಿಗಳಾದ ಶ್ರೀ ಸತೀಶ್ ಟಿ ಎನ್ ಇವರು ಹಿಂದಿನ ಸಭೆಯ ವರದಿಯನ್ನು ಮಂಡಿಸಿದರು.
ವಲಯವಾರು ಭಜನಾ ಮಂಡಳಿಗಳ ಸದಸ್ಯರ ಜೊತೆ ಭಜನಾ ಕಾರ್ಯಕ್ರಮಗಳ, ವಲಯ ಸಭೆ ನಡೆಸುವ ಬಗ್ಗೆ ವಿಮರ್ಶೆ ಮಾಡಲಾಯಿತು.
ವಾರ್ಷಿಕ ಸಾಧನಾ ವರದಿಯನ್ನು ತಾಲೂಕು ಯೋಜನಾಧಿಕಾರಿಗಳು ಮಂಡಿಸಿದರು. ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಸುಳ್ಯ, ಜಾಲ್ಸೂರು, ಸಂಪಾಜೆ, ನಿಂತಿಕಲ್ಲು, ಬೆಳ್ಳಾರೆ, ಅಜ್ಜಾವರ ವಲಯಗಳಲ್ಲಿ ನಡೆದ ವಿಶೇಷ ಕಾರ್ಯಕ್ರಮಗಳ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು.

ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾಗಿ ಸೋಮಶೇಖರ್ ಪೈಕ, ಕಾರ್ಯದರ್ಶಿಗಳಾಗಿ ಸತೀಶ್ ಟಿ ಎನ್ ಉಪಾಧ್ಯಕ್ಷರಾಗಿ ನಾರಾಯಣ ಕೊಡ್ತುಗುಳಿ , ಶ್ರೀಮತಿ ಸಂಧ್ಯಾ ಮಂಡೆಕೋಲು , ಜೊತೆ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕೋಶಾಧಿಕಾರಿಗಳಾಗಿ ನಾರಾಯಣ ಕಳಂಜ ರವರು ಸರ್ವಾನುಮತದಿಂದ ಆಯ್ಕೆಯಾದರು.

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಚಂದ್ರಶೇಖರ್ ಸಾಲಿಯಾನ್ ರವರು ಶುಭ ಹಾರೈಸಿದರು. ನಿಕಟಪೂರ್ವ ತಾಲೂಕು ಭಜನಾ ಪರಿಷತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಯತೀಶ್ ರೈ ದುಗಲಡ್ಕರವರ ಸಭಾಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ವೇದಿಯಲ್ಲಿ ಭಜನಾ ಪರಿಷತ್ತಿನ ಗೌರವಾಧ್ಯಕ್ಷರಾದ ಶಿವಪ್ರಸಾದ್ ಆಲೆಟ್ಟಿ , ಉಪಾಧ್ಯಕ್ಷರಾದ ಚಂದ್ರಶೇಖರ್ ತೋಟ, ತಾಲೂಕು ಕಾರ್ಯದರ್ಶಿಗಳಾದ ಸತೀಶ್ ಟಿ ಎನ್, ತಾಲೂಕು ಜೊತೆ ಕಾರ್ಯದರ್ಶಿಗಳಾದ ಶ್ರೀಮತಿ ಸಂಧ್ಯಾ ಮಂಡೆಕೋಲು, ತಾಲೂಕು ಕೋಶಾಧಿಕಾರಿಗಳಾದ ಮಹೇಶ್ ಮೇಲ್ಕಜೆ, ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ, ಜಿಲ್ಲಾ ಭಜನಾ ಪರಿಷತ್ತು ಸಮನ್ವಯಾಧಿಕಾರಿಗಳಾದ ಸಂತೋಷ ಪಿ ಅಳಿಯೂರು ಮತ್ತಿತರರು ಉಪಸ್ಥಿತರಿದ್ದರು.
ಸುಳ್ಯ ವಲಯದ ಮೇಲ್ವಿಚಾರಕರಾದ ದಿನೇಶ್‍ ಕಾರ್ಯಕ್ರಮ ನಿರೂಪಿಸಿದರು. ನಿಂತಿಕಲ್ಲು ವಲಯ ಮೇಲ್ವಿಚಾರಕರಾದ ಶ್ರೀಮತಿ ಸವಿತಾ ಶೆಟ್ಟಿ ಧನ್ಯವಾದವಿತ್ತರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading