
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ 30-05-2025 ರಂದು ರಜೆ ಘೋಷಿಸಲಾಗಿದೆ. ಹಾಗೂ ಇಂದು ಮಾನ್ಯ ಜಿಲ್ಲಾಧಿಕಾರಿಯವರು ಜಿಲ್ಲಾದ್ಯಂತ ಮಳೆ ರಜೆ ಘೋಷಿಸಿರುವ ಕಾರಣ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ನಾಳೆ 31/5/25 ಕ್ಕೆ ಮುಂದೂಡಲಾಗಿದೆ.
