Ad Widget

ಬಾಳಿಲ: ವಿಶ್ವ ಪರಿಸರ ದಿನಾಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಯಲ್ಲಿ ಜೂ.5 ಗುರುವಾರದಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಶಾಲಾ ತೋಟದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಬಳಿಕ ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆಯ ಕಾರ್ಯಕ್ರಮ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಇವರು ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಶ್ರೀಯುತ ಡಾ.ಪಿ ಆರ್ ಭಟ್ ದೇವಸ್ಯ ಪ್ರಗತಿಪರ ಕೃಷಿಕರು, ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾವಯವ ಕೃಷಿ ಪದ್ಧತಿಗೆ ಹೆಚ್ಚು ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು. ವಿದ್ಯಾಸಂಸ್ಥೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಪರಿಸರ ದಿನಾಚರಣೆ ಸಂದೇಶ ನೀಡಿದರು. ಮುಖ್ಯಶಿಕ್ಷಕ ಉದಯಕುಮಾರ್ ರೈ ಎಸ್ ಇವರು ಎಲ್ಲರನ್ನು ಸ್ವಾಗತಿಸಿದರು. ರಾಮನ್ ಇಕೋ ಕ್ಲಬ್ ನ ಸಂಚಾಲಕ ಶಿಕ್ಷಕರಾದ ಶ್ರೀ ಮೋಹನ್ ಕೆ ಸಿ.ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಪ್ರಯುಕ್ತ ವರ್ಣಚಿತ್ರ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ಛಾಯ, ಪ್ರಾಪ್ತಿ, ರಕ್ಷಾ, ಶ್ರಾವ್ಯಾ ಮತ್ತು ಸಾನ್ವಿ ಇವರು ಆರಂಭ ಗೀತೆ ಹಾಡಿದರು. ಗಣಿತ ವಿಜ್ಞಾನ ಶಿಕ್ಷಕಿ ಅಪರ್ಣ ಟಿ ಇವರು ವಂದಿಸಿದರು. ವಿದ್ಯಾರ್ಥಿಗಳಾದ ನಿಶಾಲ್ ಭಾಸ್ಕರ್ ಮತ್ತು ಲಿಖಿತ್ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲೆಯ ರಾಮನ್ ಇಕೋ ಕ್ಲಬ್ ಈ ಕಾರ್ಯಕ್ರಮವನ್ನು ಸಂಘಟಿಸಿತು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading