Ad Widget

ಅಡ್ತಲೆ : ನಿವೃತ್ತರಿಗೆ ಹಾಗೂ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಹಾಗೂ ಉಚಿತ ಹಣ್ಣಿನ ಗಿಡಗಳ ವಿತರಣೆ ಕಾರ್ಯಕ್ರಮ

ಶಾಲಾಭಿವೃದ್ಧಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ,ಸ್ಪಂದನ ಗೆಳೆಯರ ಬಳಗ (ರಿ)ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವುಗಳ ಜಂಟಿ ಆಶ್ರಯದಲ್ಲಿ ಕೆ.ವಿ.ಜಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಉಪನ್ಯಾಸಕರಾದ ಶ್ರೀ ಭವಾನಿ ಶಂಕರ ಅಡ್ತಲೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ರ್ಯಂಕ್ ಪಡೆದ ಕು.ಮಹಿಕಾ ಉಳುವಾರು ಇವರಿಗೆ ಸನ್ಮಾನ ಹಾಗೂ ಉಚಿತ ಹಣ್ಣಿನ ಗಿಡಗಳ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 07.06.2025 ರಂದು ಅಡ್ತಲೆ ಶಾಲಾ ಸಭಾಂಗಣದಲ್ಲಿ ನಡೆಯಿತು.

. . . . . . . . .


ಸನ್ಮಾನ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಹೊನ್ನಪ್ಪ ಮಾಸ್ತರ್ ಅಡ್ತಲೆ ಇವರು ನೆರವೇರಿಸಿ ಶುಭ ಹಾರೈಸಿದರು. ಸನ್ಮಾನಿತರ ಕುರಿತು ಕೆ.ವಿ.ಜಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀ ದಿನೇಶ್ ಮಡ್ತಿಲ ಇವರು ಅಭಿನಂದನಾ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಹಿತ್ ಮೇಲಡ್ತಲೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೇಶವ ಅಡ್ತಲೆ, ಸುಳ್ಯ ಉಪ ವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ ,‌ ಅರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸಂತೋಷ್ ಕುತ್ತಮೊಟ್ಟೆ , ಅಡ್ತಲೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಮುಕುಂದ ದೇರಾಜೆ , ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಅಡ್ತಲೆ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಅಡ್ತಲೆ ಇವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ ಶ್ರೀ ರತನ್ ಕಿರ್ಲಾಯ ಧನ್ಯವಾದಗೈದು ಶ್ರೀ ರಂಜಿತ್ ಅಡ್ತಲೆ ನಿರೂಪಿಸಿದರು.ಅಡ್ತಲೆ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಸನ್ಮಾನಿತರಿಗೆ ಸಾರ್ವಜನಿಕರ ವತಿಯಿಂದ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಗಳು‌ ನಡೆಯಿತು.
ಸಭಾ ಕಾರ್ಯಕ್ರಮದ ಮೊದಲು ಅಡ್ತಲೆ ಶಾಲಾ ವಠಾರದಲ್ಲಿ ಸುಳ್ಯ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು ನಂತರ ಸಾರ್ವಜನಿಕರಿಗೆ ಉಚಿತವಾಗಿ ಗಿಡಗಳ ವಿತರಣೆ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading