
ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ 09/06/2025 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಶ್ರೀ ಮುರಳೀಧರ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ದಿನಾ0ಕ 09/06/2025 ಮುರಳೀಧರ ಕೆ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ ಪ್ರಕಾಶ್ ಶೆಟ್ಟಿ, ಸುಳ್ಯ ಶಾಖೆಯ ಪ್ರಬಂಧಕರಾದ ಶ್ರೀ ಸಂತೋಷ್ ಪಿ, ಸೀನಿಯರ್ ಮ್ಯಾನೇಜರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
