Ad Widget

ಸುಳ್ಯ : ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಇದರ ವತಿಯಿಂದ ಜೂ 15ರಂದು ಪರಿಶಿಷ್ಟ ಜಾತಿ ಸಮುದಾಯದ ಕಾಲೇಜು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ದ.ಕ. ಜಿಲ್ಲಾ ಕಾಂಗ್ರೆಸ್ ಪ.ಜಾ. ವಿಭಾಗದ ಅಧ್ಯಕ್ಷರಾದ ದಿನೇಶ್ ಮೂಳೂರು ರವರ ನೇತೃತ್ವದಲ್ಲಿ ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಿತು.

. . . . . . . . .

ಸಭಾ ಕಾರ್ಯಕ್ರಮವು ಕು. ದ್ಯುತಿ ಇವರಿಂದ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್ ರವರು ವಹಿಸಿ ಕಾರ್ಯಕ್ರಮದ ಉದ್ದೇಶದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

. . . . . . .

ಮುಖ್ಯ ಅತಿಥಿಗಳಾದ ದ. ಕ. ಜಿಲ್ಲಾ ಕಾಂಗ್ರೆಸ್ ಪ. ಜಾ. ವಿಭಾಗದ ಅಧ್ಯಕ್ಷರಾದ ದಿನೇಶ್ ಮುಳೂರುರವರು ಮಾತನಾಡಿ ಶಿಕ್ಷಣದ ಮಹತ್ವ ವಿವರಿಸಿ, ವಿದ್ಯಾರ್ಥಿಗಳು ಜಾತಿ ಧರ್ಮ ಬೇಧಭಾವವಿಲ್ಲದೆ ಜೀವನದಲ್ಲಿ ಯಾವುದೇ ಸಂವಿಧಾನ ವಿರೋಧಿ ಸಂಘಟನೆಗಳ ಸಂಚಿಗೆ, ಕೋಮು ಸಂಘರ್ಷಗಳಿಗೆ ಬಲಿಯಾಗದೆ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಮಾರ್ಗದಲ್ಲಿ ನಡೆಸಿ ವಿದ್ಯಾಭ್ಯಾಸ ನೀಡಿ ಪ್ರತಿಭಾವಂತರನ್ನಾಗಿ ಮಾಡಬೇಕು. ಅಂಬೇಡ್ಕರ್ ಅವರ ಸಂವಿಧಾನದ ತತ್ವಗಳನ್ನು ಪಾಲಿಸಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಗುರುತಿಸುವಂತಾಗಲಿ ಹಾಗೂ ವಿದ್ಯಾರ್ಥಿಗಳು ಶಿಕ್ಷಣ, ವೃತ್ತಿ ಜೀವನದ ಜೊತೆಗೆ ನಾಯಕತ್ವ ಗುಣಗಳನ್ನು ರೂಢಿಸಿಕೊಳ್ಳಲು ಕರೆ ನೀಡಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಕೆ. ಪಿ. ಜಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಶಿಕ್ಷಣಕ್ಕೋಸ್ಕರ ಮತ್ತು ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ಸರಕಾರಗಳು ಹಾಕಿಕೊಂಡ ಕಾರ್ಯಕ್ರಮಗಳನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬಳಿಕ ಅತಿಥಿಗಳಿಂದ ಪ. ಜಾ. ಸಮುದಾಯದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ದ. ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ಬಲ್ಲಾಳ್ ಭಾಗ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸುರೇಶ್ ಅಮೈ, ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ. ಜೆ., ಸುಳ್ಯ ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯೆ ಅನಸೂಯ ಪೆರುವಾಜೆ, ಸುಳ್ಯ ಕಾಂಗ್ರೆಸ್ ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ, ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆಶಿಕ್ ಆರಂತೋಡು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲದಾಸ್, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯ ಅಬ್ಬಾಸ್ ಎ. ಬಿ., ಮುಖಂಡರುಗಳಾದ ಕರುಣಾಕರ ಪಲ್ಲತಡ್ಕ, ಕೇಶವ ಮೊರಂಗಲ್ಲು, ಪ್ರಕಾಶ್ ಪಿ. ಎಸ್., ಪರಿಶಿಷ್ಟ ಜಾತಿ ಸಮುದಾಯದ ಕಾಲೇಜು ವಿದ್ಯಾರ್ಥಿಗಳು, ಪೋಷಕರು, ಪಕ್ಷದ ಕಾರ್ಯಕರ್ತರು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಶಶಿಧರ ಎಂ. ಜೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading