Ad Widget

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜೂ.18 ರಂದು ಜಿಲ್ಲಾ ಪಂಚಾಯತ್ ಸುಳ್ಯ ಉಪವಿಭಾಗದ ಕಾರ್ಯಾಲಯ ಉದ್ಘಾಟನೆ – ಕಾಂಗ್ರೆಸ್ ನಿಯೋಗದಿಂದ ಪೂರ್ವತಯಾರಿ ಬಗ್ಗೆ ಪರಿಶೀಲನೆ

. . . . . . . . .

ಜೂ. 18 ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ. ಕ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರು ಸುಳ್ಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೇರವಾರಿಸಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪಂಚಾಯತ್ ಉಪ ವಿಭಾಗದ ನೂತನ ಕಚೇರಿಗೆ ಭೇಟಿ ನೀಡಿ ಜಿಲ್ಲಾ ಪಂಚಾಯತ್ ಕಾರ್ಯಪಾಲಕ ಅಭಿಯಂತರರಾದ ವೇಣುಗೋಪಾಲ್ ಆರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀಮತಿ ಚೈತ್ರ ಎಸ್ ಆರ್, ಸಹಾಯಕ ಇಂಜಿನಿಯರ್ ಮಣಿಕಂಠನ್ ಜೊತೆ ಚರ್ಚಿಸಿ ಉದ್ಘಾಟನಾ ಕಾರ್ಯಕ್ರಮದ ಪೂರ್ವತಯಾರಿ ಮತ್ತು ಕಾರ್ಯಕ್ರಮದ ರೂಪುರೇಷೆ ಬಗ್ಗೆ ಪರಿಶೀಲನೆ ನಡೆಸಿದರು.

. . . . . . .

ಈ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ಕಾರ್ಯಪಾಲಕ ಅಭಿಯಂತರರು ರಾಧಾಕೃಷ್ಣ ಬೊಳ್ಳೂರು ಜೊತೆ ಪ್ರಸ್ತಾಪಿಸಿದಾಗ ಸರಕಾರದ ಮಟ್ಟದಲ್ಲಿ ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಸಚಿವರೊಂದಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.

ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಯಾವುದೇ ಲೋಪವಿಲ್ಲದೆ ಸಚಿವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ರಾಧಾಕೃಷ್ಣ ಬೊಳ್ಳೂರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಭೋಜಪ್ಪ ನಾಯ್ಕ ವಿನೋಭಾನಗರ, ವಿಜಯಕುಮಾರ್ ಆಲೆಟ್ಟಿ, ಅಬ್ದುಲ್ ರಜಾಕ್ ಸುಳ್ಯ, ಗುತ್ತಿಗೆದಾರ ರವಿಪ್ರಸಾದ್ ಕೇರ್ಪಳ, ಜಿಲ್ಲಾ ಪಂಚಾಯತ್ ಉಪವಿಭಾಗದ ಸಿಬ್ಬಂದಿಗಳು, ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading