Ad Widget

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ – ಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.
ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.
ಆಯುರ್ವೇದ ಕಾಲೇಜಿನ ವೈದ್ಯೆ ಡಾ. ರಚನಾ ಆರ್. ಯೋಗ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಯೋಗ ತರಬೇತಿಯನ್ನು ವೈದ್ಯರಾದ ಡಾ.ಹನುಮಂತ ಉತ್ತೂರ್, ಡಾ.ದರ್ಶನ್ ಶಿರಟ್ಟಿ, ಡಾ. ನೇಹ ಪಾಟೀಲ್, ಡಾ. ಗಾನವಿ ಎಂ. ನಡೆಸಿಕೊಟ್ಟರು.
ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ಸ್ವಾಗತಿಸಿ, ದೈ ಶಿ ಶಿಕ್ಷಕ ಶಿವಪ್ರಸಾದ್ ವಂದಿಸಿದರು. ಶಿಕ್ಷಕ ಶಿವಪ್ರಕಾಶ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading