Ad Widget

ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಮಂತ್ರಿಯಾಗಿ ಗೌರವ್ ಬಿ.ಡಿ
ಉಪ ಮುಖ್ಯಮಂತ್ರಿಯಾಗಿ ಅಮೃತ್.ಸಿ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ
2025 26ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕನ ಆಯ್ಕೆಯ ಪ್ರಕ್ರಿಯೆ ಶಾಲೆಯಲ್ಲಿ ನಡೆಯಿತು.
ಶಾಲಾ ವಿದ್ಯಾರ್ಥಿ ನಾಯಕನನ್ನು ವಿದ್ಯಾರ್ಥಿಗಳು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಲಾಯಿತು. ಸಂಸ್ಥೆಯಲ್ಲಿ ಮಾದರಿ ಮತಗಟ್ಟೆಯನ್ನು ರಚಿಸಿ ವಿದ್ಯಾರ್ಥಿಗಳು ಇವಿಯಂ ಮೂಲಕ ಮತ ಚಲಾಯಿಸಿದರು. ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಗುರುತಿನ ಚೀಟಿಯನ್ನು ನೀಡಿ ಬೆರಳಿಗೆ ಶಾಯಿ ಹಾಕಿಸಿಕೊಂಡು ಬಹಳ ಉತ್ಸಾಹದಿಂದ ಮತ ಚಲಾಯಿಸಿದರು. ಸಂಸ್ಥೆಯ ಶಿಕ್ಷಕರು ಮತಗಟ್ಟೆ ಅಧಿಕಾರಿ ಹಾಗೂ ಶಿಕ್ಷಕ ಶಶಿಕಾಂತ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಚುನಾವಣೆ ಪ್ರಕ್ರಿಯೆಯಲ್ಲಿ ತಾಂತ್ರಿಕ ವ್ಯವಸ್ಥೆ ಯನ್ನು ಶಿಕ್ಷಕ ಶ್ರೀ ಯೋಗನಾಥ ಸಿದ್ದಪಡಿಸಿ ಸಹಕರಿಸಿದರು.ಈ ಚುನಾವಣೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ಮೂಡಿಬಂತು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ವಿದ್ಯಾರ್ಥಿ ನಾಯಕನನ್ನು ಆರಿಸಿ ಸಂತೋಷ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ದ ರೀತಿಯಲ್ಲಿ ನಡೆದ ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಸಿದ ವಿದ್ಯಾರ್ಥಿ ಗೌರವ್ ಬಿ.ಡಿ ಹತ್ತನೇ ತರಗತಿ ಮುಖ್ಯಮಂತ್ರಿ ಆಗಿ ಆಯ್ಕೆಯಾದರು. ಹಾಗೆ ಉಪಮುಖ್ಯಮಂತ್ರಿಯಾಗಿ ಅಮೃತ ಸಿ 10ನೇ ತರಗತಿ ಆಯ್ಕೆಯಾದರು. ಆಯ್ಕೆಯಾದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಶುಭ ಹಾರೈಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading