Ad Widget

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಅಲಭ್ಯತೆಯ ಕಾರಣ ಕೆಲಸ ಕಳೆದುಕೊಂಡಿರುವ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಜಾನಿ.ಕೆ.ಪಿ ಮನವಿ

ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ. ಈಗಾಗಲೇ ಅತಿಯಾದ ಮಳೆಯ ಕಾರಣಕ್ಕೆ ಕೆಲಸ ಮಾಡಲು ಕಷ್ಟಪಡುತ್ತಿರುವ ಕಟ್ಟಡ ಕಾರ್ಮಿಕರಿಗೆ ಇದೀಗ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು  ಕೂಡಲೇ ಕೆಂಪು ಕಲ್ಲು ಗಣಿಗಾರಿಕೆಯನ್ನು ಆಶ್ರಯಿಸಿ ಬದುಕು ನಡೆಸುತ್ತಿರುವ ಸಂತ್ರಸ್ತ ಕಾರ್ಮಿಕರ ನೆರವಿಗೆ ತುರ್ತಾಗಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಅವರು ಗುರುವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಸಚಿವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಬಗ್ಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಪೂರಕವಾಗಿ ಸ್ಪಂಧಿಸಿದ್ದು, ಕೂಡಲೇ ಸಂಬಂಧಪಟ್ಟ ಸಚಿವರುಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾತನಾಡುತ್ತೇನೆ ಎಂದು ಬರವಸೆ ನೀಡಿರುತ್ತಾರೆಂದು ತಿಳಿದು ಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading