Ad Widget

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ದಿನಾಚರಣೆ ; ಸನ್ಮಾನ ಕಾರ್ಯಕ್ರಮ

“ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ” : ವಾಲ್ಟರ್ ನಂದಳಿಕೆ

ಮಂಗಳೂರು ಜು.02 : “ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ” ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ  ಮಂಗಳೂರು ಪತ್ರಿಕಾ ಭವನದಲ್ಲಿ  ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ “ಮಾಧ್ಯಮದ ಸವಾಲುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಇವರು “ಇತ್ತೀಚೆಗೆ ಸಮೀಕ್ಷೆಯೊಂದರ ಪ್ರಕಾರ ಶೇ.60ರಷ್ಟು ಜನರು ಮುದ್ರಣ ಮಾಧ್ಯಮವನ್ನು ನಂಬುತ್ತಾರೆ. ಶೇ.63ರಷ್ಟು ಜನರು ಟಿ.ವಿ ನ್ಯೂಸ್ ನ್ನು ನಂಬುವುದಿಲ್ಲ. ಶೇ 89 ರಷ್ಟು ಮಂದಿ ಸಾಮಾಜಿಕ ಮಾಧ್ಯಮಗಳನ್ನು, ಆನ್ ಲೈನ್ ವೆಬ್ ಸೈಟ್ ಗಳನ್ನು ನಂಬುವುದಿಲ್ಲ” ಎಂದು ತಿಳಿಸಿದ್ದಾರೆ.
“ಮಾದ್ಯಮ ಕ್ಷೇತ್ರದಲ್ಲಿ ಡಿಜಿಟಲ್, ಕೃತಕ ಬುದ್ಧಿ ಮತ್ತೆಯ ತಂತ್ರಜ್ಞಾನದ ಪ್ರವೇಶವಾಗಿದೆ ಆದರೆ ಸೃಜನಶೀಲತೆ ಮೂಲಕ ಈ ಸವಾಲು ಗಳನ್ನು ಎದುರಿಸಬಹುದು. ಮಾಧ್ಯಮಗಳು ಜನರಲ್ಲಿ ವಿಶ್ವಾಸಾರ್ಹತೆಯನ್ನು ಮೂಡಿಸುವ ಬಗ್ಗೆ ಹೆಚ್ಚು ಕಾರ್ಯಪ್ರವೃತ್ತವಾಗಬೇಕು” ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್ ಯು.ಎಚ್ ಮಾತನಾಡುತ್ತಾ “ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಈ ನಡುವೆ ಮಾಧ್ಯಮ ಕ್ಷೇತ್ರದ ತಳ ಮಟ್ಟದಲ್ಲಿ ಪತ್ರಿಕಾ ವಿತರಣೆ ನಡೆಸುತ್ತಿರುವವರನ್ನು ಗೌರವಿಸುತ್ತಿರುವುದು ಶ್ಲಾಘನೀಯ” ಎಂದರು.
ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಹಿರಿಯ ಪತ್ರಿಕಾ ವಿತರಕ ರಘುರಾಮ.ಕೆ ಯವರನ್ನು  ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ
ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ, ಕುಮಾರನಾಥ್, ಕೆ.ವಿ‌.ಜಾರ್ಜ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ದ.ಕ ಜಿಲ್ಲಾ ಪತ್ರಕರ್ತರ ಸಂಘದ  ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading