Ad Widget

ಆಲೆಟ್ಟಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕಾರ್ಯಕರ್ತರ ಅಹವಾಲು ಸ್ವೀಕಾರ

ದ.ಕ. ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಜು.15 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರ ಭೇಟಿಯಾಗಿ ಅಹವಾಲು ಸ್ವೀಕರಿಸಿದರು.
ಆಲೆಟ್ಟಿಗೆ ಆಗಮಿಸಿದ ಸಂಸದರು ಸೊಸೈಟಿ ಸಭಾಂಗಣದಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದಕು| ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೀಣಾ ವಸಂತ ಆಲೆಟ್ಟಿ, ಆಲೆಟ್ಟಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ, ಮಹಾಶಕ್ತಿ ಅಧ್ಯಕ್ಷರಾದ ಹೇಮಂತ್ ಮಠ, ಮಂಡಲ ಬಿಜೆಪಿ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಮಂಡಲ ಬಿಜೆಪಿ ಪ್ರಧಾನ ಬಿಜೆಪಿ ಕಾರ್ಯದರ್ಶಿ ಪ್ರದೀಪ್ ಮನವಳಿಕೆ, ಮಹಾಶಕ್ತಿ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದಿರೆ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕು.ಇಂಚರ ಮತ್ತು ಕು.ದಿಶಾ ಆಲೆಟ್ಟಿ ಪ್ರಾರ್ಥಿಸಿದರು. ಜಾಲ್ಸೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು ಸ್ವಾಗತಿಸಿ, ಪ್ರವೀಣ್ ಕಲ್ಲೆಂಬಿ ವಂದಿಸಿದರು. ಆಲೆಟ್ಟಿ ಪಂಚಾಯತ್‌ ಸದಸ್ಯ ಶಿವಾನಂದ ರಂಗತ್ತಮಲೆ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading