Ad Widget

ಸುಬ್ರಹ್ಮಣ್ಯ : ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಹಾಗೂ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 20 : ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಇವರುಗಳ ಜಂಟಿ ಆಶ್ರಯದಲ್ಲಿ ಇಂದು ಕುಮಾರಧಾರ ಕುಲ್ಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.
ಕುಮಾರಧಾರ ಸೇತುವೆ ಬದಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಮೂಲಕವಾಗಿ ಕುಲ್ಕುಂದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಕಾಲೋನಿ ರಸ್ತೆಯ ಪರಿಸರದಲ್ಲಿ ಇದ್ದಂತಹ ಕಸ-ಕಡ್ಡಿಗಳು, ಪ್ಲಾಸ್ಟಿಕ್ ಬಾಟಲ್ ಗಳು, ಪ್ಲಾಸ್ಟಿಕ್ ಚೀಲಗಳು ಹಾಗೂ ಇನ್ನಿತರ ಕಸ ವಸ್ತುಗಳನ್ನು ಹೆಕ್ಕಿ ಶೇಖರಿಸಿ ಇಡೀ ಪರಿಸರವನ್ನು ಸ್ವಚ್ಛಗೊಳಿಸುವ ಕೆಲಸವನ್ನು ಕೈಗೊಳ್ಳಲಾಯಿತು.
ಇಂದಿನ ಈ ಸೇವಾ ಕಾರ್ಯದಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸ್ವಯಂಸೇವಕರುಗಳು ಸಂಘ ಸಂಸ್ಥೆಯ ಸ್ವಯಂಸೇವಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಮುಖ್ಯಸ್ಥರಾದ ಡಾ.ರವಿ ಕಕ್ಕೆಪದವು, ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ನಡುತೋಟ, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್, ಸೀನಿಯರ್ ಚೇಂಬರ್ ಕಾರ್ಯದರ್ಶಿ ಹಾಗೂ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಗೋಪಾಲ ಎಣ್ಣೆಮಜಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್.ಆರ್ “ಸ್ವಚ್ಛ ಪರಿಸರದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಲೇಬೇಕು, ಕುಕ್ಕೆ ಕ್ಷೇತ್ರದಂತಹ ಪವಿತ್ರ ಕ್ಷೇತ್ರವನ್ನು ನಾವು ಸ್ವಚ್ಛತೆಯಿಂದ ಇಟ್ಟುಕೊಳ್ಳಲು ಶ್ರಮಿಸೋಣ. ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ. ಆ ರೀತಿಯಾಗಿ ನಾವೆಲ್ಲರೂ ದೇವರ ಸೇವೆಯನ್ನು ನಿರಂತರವಾಗಿ ಮಾಡೋಣ” ಎಂದು ಶುಭ ಹಾರೈಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading