Ad Widget

ನಾಳೆ(ಜು.22) ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಬ್ರಾಯ ಸಂಪಾಜೆಯವರಿಗೆ ಸನ್ಮಾನ

ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 22ರಂದು ಪತ್ರಿಕಾ ದಿನಾಚರಣೆಯು ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿಗಳಾದ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ.
ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಲಿದ್ದು, ಆಕಾಶವಾಣಿ ಮಡಿಕೇರಿ ಕೇಂದ್ರದ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಗುವುದು.
ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಜಣ್ಣ ಸನ್ಮಾನ ಮಾಡಲಿದ್ದಾರೆ.
ವಿಜಯ ಕರ್ನಾಟಕ ದೈನಿಕದ ಹಿರಿಯ ಉಪ ಸಂಪಾದಕರಾದ ಆರ್.ಸಿ ಭಟ್ ಉಪನ್ಯಾಸ ನೀಡಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading