Ad Widget

ಸಂಪಾಜೆ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪರಿಶೀಲನೆ ನಡೆಸಿದರು. 
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರವಾಡೆ ವಿನಾಯಕ್ ಕಾರ್ಬಾರಿ ಐ.ಎ.ಎಸ್ ಭೇಟಿ ನೀಡಿ ಗೂನಡ್ಕ ಕುಡಿಯುವ ನೀರಿನ ಟ್ಯಾಂಕ್, ಕುಡಿಯುವ ನೀರಿನ ಮೀಟರ್, ಮೀಟರ್ ಇರುವ ಸ್ಥಳ ಪರಿಶೀಲನೆ ನಡೆಸಿ ಮೀಟರ್ ದರದಲ್ಲಿ 24 ಗಂಟೆಗಳ ನೀರು ಪೂರೈಕೆ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ಕುಡಿಯುವ ನೀರಿನ ಮೀಟರ್ ಮೂಲಕ ದರ ನಿಗದಿ ಮಾಡುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರಘು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ , ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ, ಉಪಾಧ್ಯಕ್ಷರಾದ ಎಸ್.ಕೆ.ಹನೀಫ್, ಕುಡಿಯುವ ನೀರು ವಿಭಾಗದ ಸಹಾಯಕ ಅಭಿಯಂತರರಾದ ಶ್ರೀಮತಿ ಚೈತ್ರಾ, ಇಂಜಿನಿಯರ್ ವಿಭಾಗದ ಮಣಿಕಂಠ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ ಹಮೀದ್ ಗೂನಡ್ಕ, ಸದಸ್ಯರಾದ ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್, ಲಿಸ್ಸಿ ಮೊನಾಲಿಸಾ, ಅಬುಸಾಲಿ, ಪಂಚಾಯತ್ ಅಬಿವೃದ್ಧಿ ಆಧಿಕಾರಿ ಸರಿತಾ ಡಿಸೋಜಾ, ಪ್ರಶಾಂತ್.ವಿ.ವಿ, ಬಾಲಚಂದ್ರ, ಶರತ್ ಹಾಗೂ ಫಲಾನುಭವಿ ಅಬ್ಬಾಸ್ ಉಪಸ್ಥಿತರಿದ್ದರು.
ಈ ವೇಳೆ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ಗ್ರಾಮ ಮಟ್ಟದಲ್ಲಿ ಸಾರ್ವಜನಿಕ ಬಾವಿ ಹೂಳೆತ್ತುವ ಬಗ್ಗೆ, ಗ್ರಾಮ ಮಟ್ಟದಲ್ಲಿ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಅನುದಾನ ಒದಗಿಸುವ ಬಗ್ಗೆ ವಿನಂತಿ ಮಾಡಲಾಯಿತು.
ಇದಕ್ಕೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.‌

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading