Ad Widget

ದೇವಚಳ್ಳ : ಅನಾರೋಗ್ಯದಿಂದ ಮಹಿಳೆ ಮೃತ್ಯು

ದೇವಚಳ್ಳ ಗ್ರಾಮದ ಅಡ್ಡನಪಾರೆ ಕಲ್ಲಾಜೆ ಕುಸುಮಾಧರ ಅವರ ಪತ್ನಿ ಪ್ರಮೀಳಾ (42) ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ಬ್ರೈನ್ ಹೆಮರೇಜ್ ಗೆ ಒಳಗಾದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಮೃತರು ಪತಿ, ಪುತ್ರ ಭವಿಷ್, ಪುತ್ರಿ ಮಹಿತಾ, ತಂದೆ, ತಾಯಿ, ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿದ್ಯುತ್ ಸಮಸ್ಯೆಯ ಬಗ್ಗೆ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದ ಶಾಸಕರು

ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಸುಳ್ಯದ ಬಹುತೇಕ ಎಲ್ಲಾ ಕಡೆಗಳಲ್ಲಿ ಮರಬಿದ್ದು  ವಿದ್ಯುತ್ ಕಂಬಗಳು ಹಾನಿಯಾದ ವರದಿಯನ್ನು ಮತ್ತು ಸಮಸ್ಯೆಗೊಳಗಾದ ಪ್ರದೇಶಕ್ಕೆ ಶೀಘ್ರವಾಗಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಶಾಸಕರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಮತ್ತು ಮೆಸ್ಕಾಂ ಎಮ್.ಡಿ ಜಯಕುಮಾರ್ ಅವರಿಗೆ ಕರೆ ಮಾಡಿ ಸುಳ್ಯ ಕಡಬ ಭಾಗದಲ್ಲಿ ಖಾಲಿ ಇರುವ ಪವರ್ ಮ್ಯಾನ್ ಹುದ್ದೆಗಳಿಗೆ ನೇಮಕಗೊಂಡಿರುವ...
Ad Widget

ತಾಲೂಕು ಗೌಡ ಮಹಿಳಾ ಘಟಕದ ವರ್ಷ ಸಂಭ್ರಮ

ಸಾಂದೀಪ್ ಶಾಲೆಯ ಮಕ್ಕಳ ಜೊತೆ ವಿಶೇಷ ಕಾರ್ಯಕ್ರಮ‌

ಗೌಡರ ಯುವ ಸೇವಾ ಸಂಘ ಸುಳ್ಯ, ತಾಲೂಕು ಗೌಡ ಮಹಿಳಾ ಘಟಕ ಸುಳ್ಯ ಇದರ ಆಶ್ರಯದಲ್ಲಿ ಮಹಿಳಾ ಘಟಕದ "ವರ್ಷ ಸಂಭ್ರಮ" ಕಾರ್ಯಕ್ರಮ ಸಾಂದೀಪ್ ವಿಶೇಷ ಶಾಲೆಯಲ್ಲಿ ಜು.28 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ವಿನುತಾ ಪಾತಿಕಲ್ಲು ವಹಿಸಿದ್ದರು.  ಮುಖ್ಯ ಅತಿಥಿ ಡಾ.ಸಾಯಿಗೀತ ಜ್ಙಾನೇಶ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ...

ಐನೆಕಿದು : ಗಾಳಿ-ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರಗಳನ್ನು ತೆರವುಗೊಳಿಸಲು ಮೆಸ್ಕಾಂ ಇಲಾಖೆಯವರಿಗೆ ಸಹಕರಿಸಿದ ನಿಸರ್ಗ ಯುವಕ ಮಂಡಲದ ಸದಸ್ಯರು

ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಗೆ ಐನೆಕಿದು ಗ್ರಾಮದ ಗುಂಡಡ್ಕದಿಂದ ಮಲೆಯಾಳದವರೆಗೆ ಪೈಲಾಜೆ, ಐನೆಕಿದು, ಕೆರೆಕಾಡು ಹಾಗೂ ನವಗ್ರಾಮ ಸೇರಿದಂತೆ ಮುಂತಾದ ಕಡೆಗಳಲ್ಲಿ ರಸ್ತೆ ಬದಿಯಲ್ಲಿ ಇದ್ದ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿಬಿದ್ದು ಸುಮಾರು 10 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಅಲ್ಲದೇ ರಸ್ತೆಗೆ ಮರಗಳು ಉರುಳಿಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಸಂದರ್ಭದಲ್ಲಿ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಮೂವರಿಗೆ ಪಿ.ಎಚ್.ಎಫ್ ಪದವಿ

ಸುಬ್ರಹ್ಮಣ್ಯ ಜುಲೈ 24 : ರೋಟರಿ ಅಂತರಾಷ್ಟ್ರೀಯ ಸಂಸ್ಥೆಯ ಸ್ಥಾಪಕರಾದ ಪೌಲ್  ಹ್ಯಾರಿಸ್ ಅವರ ಸವಿನೆನಪಿನಲ್ಲಿ ರೋಟರಿಯಲ್ಲಿ ಸಲ್ಲಿಸಿದ ಅತ್ಯುನ್ನತ ಸೇವೆಗಾಗಿ  ಕೊಡಮಾಡುವ  ಪದವಿ ಪೌಲ್ ಹ್ಯಾರಿಸ್ ಫೆಲೋಶಿಪ್(PHF) ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಶೇಖರ ನಾಯರ್, ಪೂರ್ವಾಧ್ಯಕ್ಷರಾದ ಮೈಲಪ್ಪ  ಸಂಕೇಶ ಹಾಗೂ ಕಾರ್ಯದರ್ಶಿ ಚಿದಾನಂದ ಕುಳ ಇವರಿಗೆ ಈ ಬಾರಿ...

ಕುಕ್ಕೆ : ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ನಿವೃತ್ತ ಯೋಧರಿಗೆ ಗೌರವಾರ್ಪಣೆ

ಸುಬ್ರಹ್ಮಣ್ಯ: ಜೆಸಿಐ ಕಡಬ ಕದಂಬ, ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಸೋಮವಾರ ನಡೆಯಿತು.ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.ನಿವೃತ್ತ ಸುಭೇದಾರ್ ವಾಸುದೇವ ಗೌಡ ನಡ್ಕ ದಿಕ್ಸೂಚಿ ಭಾಷಣ...

ಮರ್ಕಂಜ : ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಸರ್ಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ ಪಠ್ಯಧಾರಿತ ಮೌಲ್ಯಾಂಕನ ಬುನಾದಿ ಸಾಮರ್ಥ್ಯ ಮತ್ತು ಸಂಖ್ಯಾಜ್ಞಾನ, ಸಚೇತನ ಕಾರ್ಯಕ್ರಮ ಹಾಗೂ ಮಾದಕ ವಸ್ತುಗಳ ಜಾಗೃತಿ ಮುಂತಾದ ವಿಷಯಗಳ ಕುರಿತು ಪೋಷಕರಿಗೆ ಮಾಹಿತಿ ನೀಡುವ ಸಲುವಾಗಿ ಜು.26 ರಂದು ಪೋಷಕರ ಸಭೆ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ವೀಣಾ.ಎಂ.ಟಿ, ಶಾಲಾಭಿವೃದ್ಧಿ...

ಕಡಬ ಪಟ್ಟಣ ಪಂಚಾಯತ್ ಚುನಾವಣೆ : ಎಸ್‌.ಡಿ.ಪಿ.ಐ ಅಭ್ಯರ್ಥಿಗಳು ಕಣಕ್ಕೆ

ಕಡಬ : ಜು.27 - ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌.ಡಿ.ಪಿ.ಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು  ಎಸ್‌.ಡಿ.ಪಿ.ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ  ಕಲಾರದ ರಮಳಾನ್ ಸನ್ ರೈಸ್ ರವರ ಮನೆಯಲ್ಲಿ  ನಡೆಯಿತು.ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಸಮಿತಿಗೆ...

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ  ಕನಕದಾಸರ ಕುರಿತು "ಕನಕ ಕಾವ್ಯ ವೈಭವ" ಎಂಬ ಸಂಗೀತ-ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ-ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು  ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ...

ಚತ್ರಪ್ಪಾಡಿ – ಮರದ ಗೆಲ್ಲು ಬಿದ್ದು ಮಹಿಳೆ ಮೃತ್ಯು

ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಮರ ಮೃತಪಟ್ಟ ದಾರುಣ ಘಟನೆ ಜು.27 ರಂದು ನಡೆದಿದೆ.ದಿ.ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ ಮೃತ ದುರ್ದೈವಿ.ಅವರು ಮನೆ ಸಮೀಪವಿದಲ್ಲಿದ್ದಾಗ ಮರದ ಗೆಲ್ಲು ತುಂಡಾಗಿ ಬಿದ್ದು ಮರದಡಿಗೆ ಸಿಲುಕಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರು ಪುತ್ರ ವಸಂತ, ಪುತ್ರಿಯರಾದ ಮಮತಾ ಮತ್ತು ವನಿತಾರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!