Ad Widget

ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ನೆಲಕ್ಕುರುಳಿದ 15 ಹೆಚ್.ಟಿ ಹಾಗೂ 5 ಎಲ್.ಟಿ ವಿದ್ಯುತ್ ಕಂಬಗಳು ; ಹಾನಿಗೊಳಗಾದ ಒಂದು ವಿದ್ಯುತ್ ಪರಿವರ್ತಕ

ಸಮರೋಪಾದಿಯಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಡೆಸುತ್ತಿರುವ ಮೆಸ್ಕಾಂ ಪವರ್ ಮ್ಯಾನ್ ಗಳು ಹಾಗೂ ಸಿಬ್ಬಂದಿಗಳು

(ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ ಹಾಗೂ ಕಡಬ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಎರಡೂ ತಾಲೂಕುಗಳ ವಿವಿಧೆಡೆಗಳಲ್ಲಿ ಮರಗಳು ಬಿದ್ದು ಹಲವಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯಾಪಕ ವ್ಯತ್ಯಯ ಉಂಟಾಗಿದೆ.
ಕಳೆದ ಶನಿವಾರ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಸುಬ್ರಹ್ಮಣ್ಯ ಮೆಸ್ಕಾಂ ವ್ಯಾಪ್ತಿಯಲ್ಲಿ ಮರಗಳು ಹಾಗೂ ಮರದ ಕೊಂಬೆಗಳು ಬಿದ್ದ ಪರಿಣಾಮವಾಗಿ ಸುಮಾರು 15 ಹೆಚ್.ಟಿ ವಿದ್ಯುತ್ ಕಂಬಗಳು ಹಾಗೂ ಸುಮಾರು 5 ಎಲ್.ಟಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಒಂದು ವಿದ್ಯುತ್ ಪರಿವರ್ತಕ ಹಾನಿಗೊಳಗಾಗಿದೆ. ಮೆಸ್ಕಾಂ ವತಿಯಿಂದ ವಿದ್ಯುತ್ ಲೈನ್ ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಮೆಸ್ಕಾಂ ಪವರ್ ಮ್ಯಾನ್ ಗಳು ಹಾಗೂ ಸಿಬ್ಬಂದಿಗಳಿಗೆ ಸ್ಥಳೀಯರು ಸಹಕರಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading