Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಮೂವರಿಗೆ ಪಿ.ಎಚ್.ಎಫ್ ಪದವಿ

ಸುಬ್ರಹ್ಮಣ್ಯ ಜುಲೈ 24 : ರೋಟರಿ ಅಂತರಾಷ್ಟ್ರೀಯ ಸಂಸ್ಥೆಯ ಸ್ಥಾಪಕರಾದ ಪೌಲ್  ಹ್ಯಾರಿಸ್ ಅವರ ಸವಿನೆನಪಿನಲ್ಲಿ ರೋಟರಿಯಲ್ಲಿ ಸಲ್ಲಿಸಿದ ಅತ್ಯುನ್ನತ ಸೇವೆಗಾಗಿ  ಕೊಡಮಾಡುವ  ಪದವಿ ಪೌಲ್ ಹ್ಯಾರಿಸ್ ಫೆಲೋಶಿಪ್(PHF) ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಶೇಖರ ನಾಯರ್, ಪೂರ್ವಾಧ್ಯಕ್ಷರಾದ ಮೈಲಪ್ಪ  ಸಂಕೇಶ ಹಾಗೂ ಕಾರ್ಯದರ್ಶಿ ಚಿದಾನಂದ ಕುಳ ಇವರಿಗೆ ಈ ಬಾರಿ ಲಭಿಸಿರುತ್ತದೆ.
ಚಂದ್ರಶೇಖರ ನಾಯರ್ ಅವರು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕರಾಗಿ, ಬಾನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಮೈಲಪ್ಪ ಸಂಕೇಶ ಅವರು ತಾಲೂಕಿನ ಹಲವು ಅಂಗನವಾಡಿಗಳಿಗೆ ಶಾಲೆಗಳಿಗೆ ಕೊಡುಗೆಗಳನ್ನು ನೀಡುತ್ತಾ ಬಂದಿರುವುದಲ್ಲದೆ ಹಲವು ಮನೆಗಳಿಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆಯನ್ನು ಕೂಡ ಕಲ್ಪಿಸಿರುತ್ತಾರೆ.
ಚಿದಾನಂದ ಕುಳ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರಾಗಿ, ಬಳ್ಪ ಯುವಕ ಮಂಡಲದ ಸದಸ್ಯರಾಗಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಕೂಡ ಕ್ರಿಯಾಶೀಲರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಇವರೆಲ್ಲರೂ ರೋಟರಿ  ಸಂಸ್ಥೆಯಲ್ಲಿ ಪ್ರತಿವರ್ಷ ಅಂತರಾಷ್ಟ್ರೀಯ ಸಂಸ್ಥೆಗೆ ದೇಣಿಗೆಯನ್ನು ನೀಡುತ್ತಾ ಬಂದಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading