- Saturday
- March 7th, 2026
ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರು ವರ್ಗಾವಣೆಗೊಂಡಿದ್ದು, ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ. ಇವರು ಕಳೆದ ಮೂರು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪುತ್ತೂರಿನ ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ...
ಕೇರಳ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಗಡಿಪ್ರದೇಶ ಬಂದಡ್ಕದ ಮೂಲಕ ಹಾದು ಹೋಗುವ ಅಂತರ್ ರಾಜ್ಯ ಬಸ್ ವ್ಯವಸ್ಥೆಯನ್ನು ಒದಗಿಸುವ ಕುರಿತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು. ಗಡಿನಾಡು ಕನ್ನಡಿಗರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಬೊಡ್ಡನಕೊಚ್ಚಿ, ಗ್ರಾಮ ಗೌಡ ಸಮಿತಿಯ ಅಧ್ಯಕ್ಷರಾದ ವೆಂಕಟ್ರಮಣ ಕೊಯಿಂಗಾಜೆ, ಮಾಜಿ ಅದ್ಯಕ್ಷರಾದ ಅಚ್ಚುತ...
ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾದರಿ ಚುನಾವಣೆ ನಡೆಸಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಲಾಯಿತು. ವಿದ್ಯಾರ್ಥಿ ಸಂಸತ್ತಿನ ಸಲಹೆಗಾರರಾದ ಶಿಕ್ಷಕಿ ಶ್ರೀಮತಿ ರೂಪಾರವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯ ಮಾಹಿತಿಯನ್ನು ನೀಡಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಜು.01 ರಂದು ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ ಕಾರ್ಯಕ್ರಮದ ಉದ್ಘಾಟನಾ...
ಸುಳ್ಯ ತಾಲೂಕು ವಿಶ್ವ ಹಿಂದೂ ಪರಿಷತ್ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಗೋಳ್ವಾಲ್ಕರ್ ಆಯ್ಕೆಯಾಗಿದ್ದಾರೆ. ಇವರು ಕಲ್ಲಪ್ಪಳ್ಳಿಯ ನಿವಾಸಿಯಾಗಿದ್ದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಸುಬ್ರಹ್ಮಣ್ಯ ಜುಲೈ 1 : ಉಡುಪಿ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಅವರು ಪರ್ಯಾಯ ಸಂಚಾರ ಅನ್ವಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಸಂಜೆ ಆಗಮಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಏಸುರಾಜ್ ರವರು ಸ್ವಾಮೀಜಿ ಅವರನ್ನು ಕಾಶಿಕಟ್ಟೆ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬೆಳ್ಯಪ್ಪ ಗೌಡ ಮಣಿಯಾನಮನೆ ರವರು ಅಧಿಕಾರ ಸ್ವೀಕರಿಸಿದರು.ಜು.01 ರಂದು ಅನಂತರಾಮ ಮಣಿಯಾನಮನೆ ರವರು ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಜು.01 ರಂದು ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.ಬೀಳ್ಕೊಡುಗೆ ಸಮಾರಂಭದಲ್ಲಿ ಶ್ರೀಮತಿ ಉಷಾ ಅನಂತರಾಮ ಮಣಿಯಾನಮನೆ ದಂಪತಿಗಳನ್ನು ಫಲ-ಪುಷ್ಪ, ಸ್ಮರಣಿಕೆ ನೀಡಿ ಶಾಲು-ಹಾರ ಹಾಕಿ ಗೌರವಿಸಲಾಯಿತು.ಸೊಸೈಟಿ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ...
ಸುಳ್ಯದ ಎನ್.ಎಂ.ಪಿ.ಯು.ಸಿ. ಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮಾದಕ ವಸ್ತುಗಳ ಉಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಕ್ಷೇಮಾಧಿಕಾರಿ,ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಬೋಧಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಾ...
ದಾರುಲ್ ಹಿಕ್ಮಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ ಇದರ ಮಂತ್ರಿ ಮಂಡಲ ರಚನೆಯು ದಿನಾಂಕ 28.06.2025ರಂದು ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮುಖ್ಯಮಂತ್ರಿಯಾಗಿ ಮಹಮ್ಮದ್ ರಹೀಝ್ ಕೆ.ಎಂ(8ನೇ ತರಗತಿ), ಶಾಲಾ ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ಅಫ್ರೀದ್(8ನೇ ತರಗತಿ) ಮತ್ತು ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಅಸೀದ್(8ನೇ ತರಗತಿ) ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ಶಮೀಮ್(7ನೇ ತರಗತಿ),...
Loading posts...
All posts loaded
No more posts
