- Saturday
- March 7th, 2026
ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜು.26 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ...
ಸುಳ್ಯ ಕಸಬಾ ಗ್ರಾಮದ ಕೊಯಿಂಗೋಡಿ ದಿ.ಭವಾನಿ ಪ್ರಸಾದ್ ರವರ ಪುತ್ರ ನಿತಿನ್ ಕೊಯಿಂಗೋಡಿ(35ವ) ಯವರು ಅಸೌಖ್ಯದಿಂದ ಜು.25 ರಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜು.25 ರಂದು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.ಮೃತರು ತಾಯಿ ಕವಿತಾ, ಪತ್ನಿ ಶಿಲ್ಪ, ಪುತ್ರ ಪ್ರಿಯಂಷು, ಸಹೋದರ, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
ದೇವರಕೊಲ್ಲಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಗೋಣಿಕೊಪ್ಪದಿಂದ ಮಂಗಳೂರು ಉಳ್ಳಾಲದ ಕಡೆಗೆ ತೆರಳುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ದೇವರಕೊಲ್ಲಿ ಸಮೀಪ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಕೊಡಗು ಜಿಲ್ಲೆಯ ಗೋಣಿಕೊಪ್ಪ...
ಜು.22 ರಂದು ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕರಾದ ಹೊನ್ನಪ್ಪ ದೇವರಗದ್ದೆ ಅವರ ಮೃತದೇಹ ಇಂದು(ಜು.25) ಕುಮಾರಧಾರ ನದಿಯಲ್ಲಿ ಪತ್ತೆಯಾಗಿದ್ದು, ಸತತ ನಾಲ್ಕು ದಿನಗಳಿಂದ ಕುಮಾರಧಾರ ನದಿಯಲ್ಲಿ ಹುಡುಕಾಟ ನಡೆಸಿದ ಈಶ್ವರ್ ಮಲ್ಪೆ ಹಾಗೂ ಅವರ ತಂಡವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ್.ಎನ್.ಎಸ್ ಇವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಇಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ...
(ವರದಿ : ಉಲ್ಲಾಸ್ ಕಜ್ಜೋಡಿ) ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಇತ್ತೀಚೆಗೆ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ನಾಳೆ(ಜು.26) ಪೂರ್ವಾಹ್ನ 10:30ಕ್ಕೆ ಹರಿಹರ ಪಳ್ಳತ್ತಡ್ಕದ...
ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಮೃತರು ಗೋಣಿಕೊಪ್ಪ ಮೂಲದವರು ಎಂದು ತಿಳಿದುಬಂದಿದೆ.
ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದ್ದು, ನಾಲ್ವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆ ರವರು ಜು.22 ರಂದು ನಾಪತ್ತೆಯಾಗಿದ್ದರು.ಘಟನೆಯ ಬಗ್ಗೆ ಅವರ ಪತ್ನಿ ಶ್ರೀಮತಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರು ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ...
ವಿವೇಕ ಜಾಗ್ರತ ಬಳಗ ಏನೆಕಲ್ಲು ಇದರ ವತಿಯಿಂದ ಜು.26 ಶನಿವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಆದಿಶಕ್ತಿ ಭಜನಾ ಮಂದಿರ ಏನೆಕಲ್ಲು ಇಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು, ಅದರೊಂದಿಗೆ ಸಾರ್ವಜನಿಕ ಆರೋಗ್ಯ ಇಲಾಖೆಯವರಿಂದ ಉಚಿತ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿವೇಕ ಜಾಗೃತ ಬಳಗ ತನ್ನ...
Loading posts...
All posts loaded
No more posts
