Ad Widget

ವಿವಿಧ ಬೇಡಿಕೆ ಈಡೇರದ ಹಿನ್ನೆಲೆ ಇಂದಿನಿಂದ(ಆ.05) ಕೆ.ಎಸ್‌.ಆರ್‌.ಟಿ.ಸಿ ನೌಕರರ ಮುಷ್ಕರ

News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ

. . . . . . . . .

ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.

. . . . . . .

“ವಿವಿಧ ಬೇಡಿಕೆ ಈಡೇರಿಸಲು ಸರಕಾರ ಒಪ್ಪದ ಕಾರಣ, ಸಾರಿಗೆ ನೌಕರರು ಮುಷ್ಕರ ನಡೆಸಲು ತೀರ್ಮಾನಿಸಿದ್ದರಿಂದ
ಇಂದಿನಿಂದ(ಆ.05) ಮುಷ್ಕರ ನಡೆಯಲಿದೆ” ಎಂದು ಕಾರ್ಮಿಕ ಸಂಘಟನೆ ಮುಖಂಡ ಅನಂತ ಸುಬ್ಬರಾವ್ ಘೋಷಣೆ ಮಾಡಿದ್ದರು.
38 ತಿಂಗಳ ಬಾಕಿ ವೇತನ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು..
1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿ.ಎಫ್ ಬಾಕಿ, ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಒಕ್ಕೂಟದೊಂದಿಗೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಸಭೆ ನಡೆಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಹಾಗೂ ಇಲಾಖಾಧಿಕಾರಿಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading