ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.08 ರಂದು ಹರಿಹರ ಪಳ್ಳತ್ತಡ್ಕ, ಬಾಳುಗೋಡು ಹಾಗೂ ಐನೆಕಿದು ಗ್ರಾಮಗಳ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿಶ್ವನಾಥ್ ಬಿಳಿಮಲೆ, ಕಾರ್ಯದರ್ಶಿ ಶ್ರೀಮತಿ ಮನೋರಮಾ, ಕೋಶಾಧಿಕಾರಿ ಶ್ರೀಮತಿ ವಿಜಯ ಕೂಜುಗೋಡು, ಗೌರವಾಧ್ಯಕ್ಷರಾದ ಶ್ರೀಮತಿ ಹರ್ಷಿಣಿ ಕಟ್ಟೆಮನೆ, ಸ್ಥಾಪಕಾಧ್ಯಕ್ಷರಾದ ಶ್ರೀಮತಿ ತಾರಾ ಮಲ್ಲಾರ, ಸಮಿತಿಯ ಸದಸ್ಯರು, ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್, ದೇವಾಲಯದ ಸಿಬ್ಬಂದಿಗಳಾದ ಲೋಕನಾಥ್ ಕಿರಿಭಾಗ, ಆಡಳಿತಾಧಿಕಾರಿಗಳಾದ ರಾಜಣ್ಣ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading