Ad Widget

ಅರಂಬೂರು : 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಹಾಗೂ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅರಂಬೂರು, ಶ್ರೀ ಮೂಕಾಂಬಿಕಾ ಭಜನಾ ಮಂದಿರ ಅರಂಬೂರು ಇದರ ಸಹಯೋಗದೊಂದಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಶುಭಾಶಿರ್ವಾದಗಳೊಂದಿಗೆ ಹಾಗೂ ಪುರೋಹಿತ ಅಭಿರಾಮ್ ಭಟ್ ಸರಳಿಕುಂಜರ ನೇತೃತ್ವದಲ್ಲಿ ಅರಂಬೂರು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಆ.09 ರಂದು ನಡೆಯಿತು.
ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ದೀಪ ಬೆಳಗಿಸುವುದರ ಮೂಲಕ 15ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕಿನ ಅಧ್ಯಕ್ಷರಾದ ಸೋಮಶೇಖರ್ ಪೈಕ ಸುಳ್ಯ, ವಲಯದ ಮೇಲ್ವಿಚಾರಕರಾದ ದಿನೇಶ್, ಶ್ರೀ ಮೂಕಾಂಬಿಕ ಭಜನಾ ಮಂದಿರದ ಗೌರವಾಧ್ಯಕ್ಷರಾದ ಶ್ರೀಪತಿ ಭಟ್ ಮಜಿಗುಂಡಿ, ಮಂಜುನಾಥೇಶ್ವರ ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಸತೀಶ್ ಟಿ.ಎನ್, ಭಜನಾ ಮಂದಿರದ ಅಧ್ಯಕ್ಷರಾದ ಪರಮೇಶ್ವರ್ ಅರಂಬೂರು, ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ ಪರಿವಾರಕಾನ, ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ, ಒಕ್ಕೂಟದ ಪದಾಧಿಕಾರಿಗಳು ಪೂಜಾ ಸಮಿತಿಯ ಅಧ್ಯಕ್ಷರಾದ ಉಷಾ ಮಜಿಗುಂಡಿ, ಗ್ರಾಮ ಪಂಚಾಯತ್ ಸದಸ್ಯರುಗಳು,  ಪರಿವಾರಕಾನ ಒಕ್ಕೂಟದ ಸೇವಾ ಪ್ರತಿನಿಧಿ ಸುರೇಶ್ ಅರಂಬೂರು, ಒಕ್ಕೂಟದ ಸೇವಾ ಪ್ರತಿನಿಧಿ ವಿಜಯಶ್ರೀ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಊರಿನ ಗಣ್ಯರು ಯೋಜನೆಯ ಹಿತೈಷಿಗಳು ಭಾಗವಹಿಸಿದ್ದರು. 
ಮಧ್ಯಾಹ್ನ ಮಹಾಪೂಜೆ ನಡೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. 
ಈ ಕಾರ್ಯಕ್ರಮದಲ್ಲಿ ಊರಿನ ಸುಮಾರು 750 ಮಿಕ್ಕಿ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading