Ad Widget

ವಿದ್ಯಾ ಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲ : 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಭಾ ಕಾರ್ಯಕ್ರಮವು ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣ ರಾವ್ .ಯು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ಶ್ರೀ ಚಿದಾನಂದ ಗೌಡ ಬಾಳಿಲ, ಹಿರಿಯ ವಿದ್ಯಾರ್ಥಿ, ನಿವೃತ್ತ ಪ್ರಾಂಶುಪಾಲರು, ಕೆವಿಜಿ ಐಟಿಐ ಸುಳ್ಯ ಭಾಗವಹಿಸಿದ್ದು, "ವಿದ್ಯಾರ್ಥಿಗಳು ದೇಶ ಪ್ರೇಮ ಬೆಳಸಿಕೊಳ್ಳಕೊಳ್ಳಬೇಕು....

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ : ಸ್ವಾತಂತ್ರ್ಯೋತ್ಸವ

ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷರೂ, ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳೂ ಆದ ಎಸ್. ಅಂಗಾರ ಅವರು ಧ್ವಜಾರೋಹಣಗೈದು ಗಾಂಧೀಜಿ ಮತ್ತು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ನಿರ್ದೇಶಕರಾದ ಆನಂದ ಚಿಲ್ಪಾರು,...
Ad Widget

ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಭಕ್ತಿ ಗೀತೆ ಬಿಡುಗಡೆ

ತುಳು ನಾಡ ಗಾನ ಗಂಧರ್ವ ಗಾಯಕ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದಿಂದ ಮೂಡಿಬಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹೊಸ ಭಕ್ತಿ ಗೀತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಬಿಡುಗಡೆಗೊಳಿಸಿದರು.ಈ ಅದ್ಭುತ ಗೀತೆಯು ಜಗದೀಶ್ ಆಚಾರ್ಯ ಮತ್ತು ಅವರ ಕಲಾ ಬಳಗದಿಂದ ಮೂಡಿಬಂದಿದ್ದು, ಭಕ್ತರ ಹೃದಯ ಮುಟ್ಟುವಂತೆ...

ಪಂಜ ದೇವಸ್ಥಾನಕ್ಕೆ ನಾಗತೀರ್ಥ ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರೋತ್ಸವ ಪ್ರಯುಕ್ತ ಮೆರವಣಿಗೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರೋತ್ಸವ ಪ್ರಯುಕ್ತ ಪ್ರತೀ ವರುಷದಂತೆ ಆ.15 ರಂದು ಮೆರವಣಿಗೆ ನಡೆಯಿತು.ಬಳಿಕ ದೇಗುಲದಲ್ಲಿ ಭಜನಾ ಸಂಕೀರ್ತನೆ ನಡೆಸಿ ಶ್ರೀ ದೇವರ ಪ್ರಸಾದ, ಉಪಹಾರ ಸ್ವೀಕರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಸ್ವಾಗತಿಸಿದರು. ಮೆರವಣಿಗೆಯಲ್ಲಿ ಶಿಕ್ಷಕರು, ಪೋಷಕರು...

ಲಕ್ಷ್ಮಿ ಮುತ್ಲಾಜೆ ನಿಧನ

ನಾಲ್ಕೂರು ಗ್ರಾಮದ ನಡುಗಲ್ಲು ಮುತ್ಲಾಜೆ ದಿ.ಸುಬ್ಬಣ್ಣ ಗೌಡರ ಧರ್ಮಪತ್ನಿ ಲಕ್ಷ್ಮಿ ಅಲ್ಪಕಾಲದ ಅಸೌಖ್ಯದಿಂದ ಆ.13 ರಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ನಿವೃತ್ತ ಪೋಲೀಸ್ ಸೋಮಶೇಖರ್,  ರಾಧಾಕೃಷ್ಣ, ಪುತ್ರಿಯರಾದ ಭಾನುಮತಿ, ಸುನಂದಾ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ.ಎಲ್  ರೈ ಧ್ವಜರೋಹಣ ನೆರವೇರಿಸಿದರು.ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ ಪೂಜಾರಿ.ಕೆ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಆರ್.ಕೆ ಭಟ್ ಕುರುಂಬುಡೇಲು ಉಪಸ್ಥಿತರಿದ್ದರು.  ಬಾಲವಿಕಾಸ ಸಮಿತಿ ಅಧ್ಯಕ್ಷೆ  ಶ್ರೀಮತಿ ದೇವಿಕಾ...

ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ 79ನೇ ಸ್ವಾತಂತ್ರ ದಿನಾಚರಣೆ

ಸುಪ್ರಸಿದ್ದ ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರಿನ ಮಳಿಗೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ  ಧ್ವಜಾರೋಹಣವನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ  ನೆರವೇರಿಸಿದರು.  ಈ ಕಾರ್ಯಕ್ರಮದಲ್ಲಿ ಶ್ರೀಮತಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮಿಕಾಂತ್ ಆಚಾರ್ಯ, ಶ್ರೀಮತಿ ವೇದ ಲಕ್ಷ್ಮಿಕಾಂತ್ ಆಚಾರ್ಯ, ಸುಧನ್ವ.ಬಿ ಆಚಾರ್ಯ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ  79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ಲಾ.ಎ ಅವರು ಧ್ವಜಾರೋಹಣವನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ಕುಮಾರ್ ರೈ ಹಾಗೂ ಸದಸ್ಯರಾದ ರಾಹುಲ್ ಆಡ್ಪಂಗಾಯ, ಶ್ವೇತ ಕುಮಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ...

ಪಂಜ : ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಧ್ವಜಾರೋಹಣ ನೆರವೆರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್.ಯು.ಬಿ. ಕಾರ್ಯಕ್ರಮಕ್ಕೆ ಸ್ವಾಗತಿಸಿ ವಂದಿಸಿದರು. ಉಪಾಧ್ಯಕ್ಷರಾದ ಶ್ರೀ ನಾರಾಯಣ.ಎನ್ ಹಾಗೂ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ ಇವರು 79ನೇ ಸ್ವಾತಂತ್ರ್ಯೊತ್ಸವದ ಕುರಿತು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ...

ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವನ್ನು ಪೂರ್ವಾಹ್ನ 8:30 ಗಂಟೆಗೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೊಳಿಕೆ ರವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರತ್ಸೋವದ ಪ್ರಯುಕ್ತ ವಿಶೇಷ ಗ್ರಾಮ ಸಭೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಮತ್ತು ಪಂಚಾಯತ್...
Loading posts...

All posts loaded

No more posts

error: Content is protected !!