Ad Widget

ಹರಿಹರ ಪಳ್ಳತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಹಶಿಕ್ಷಕರಾದ ಶ್ರೀಮತಿ ಭವ್ಯ ರವರು “ಸ್ವಾತಂತ್ರ್ಯ ದಿನಾಚರಣೆಯ ಮಹತ್ವ” ದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ  ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಿತು.
ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ, ಉಪಾಧ್ಯಕ್ಷರಾದ ರಮ್ಯಾ ಹಾಗೂ ಮುಖ್ಯ ಶಿಕ್ಷಕರಾದ ಶ್ರೀಮತಿ ದೇವಕಿ ನೆತ್ತಾರ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕರಾದ ಶ್ರೀಮತಿ ದೇವಕಿ ನೆತ್ತಾರ ರವರು ಸ್ವಾಗತಿಸಿ ಸಹಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಹಶಿಕ್ಷಕರುಗಳಾದ ಶ್ರೀಮತಿ ಜಯಶ್ರೀ, ಶ್ರೀಮತಿ ಪವಿತ್ರ, ಶ್ರೀಮತಿ ಚೈತ್ರ, ಅಂಗನವಾಡಿ ಶಿಕ್ಷಕರಾದ ಶ್ರೀಮತಿ ಹರಿಣಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಎಲ್.ಕೆ.ಜಿ/ಯು.ಕೆ.ಜಿ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಲಡ್ಡು ಪ್ರಸಾದ ಹಾಗೂ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ, ಹೋಟೇಲ್ ರಾಮಕೃಷ್ಣ ರವರ ವತಿಯಿಂದ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ ರವರ ವತಿಯಿಂದ ಹಾಗೂ ಮಾಜಿ ಸೈನಿಕರಾದ ನೆತ್ತಾರ ಕುಶಾಲಪ್ಪ ಗೌಡರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading