Ad Widget

ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ ಧ್ವಜಾರೋಹಣವನ್ನು ನೆರವೇರಿಸಿದರು, ಬಂಗ್ಲೆಗುಡ್ಡೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಾಯಕ ಗುರುಕಿರಣ್ ಹಾಗೂ ವಿದ್ಯಾರ್ಥಿಗಳು ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಅಶ್ವಥ್ ಯಳದಾಳು, ಜಯಶ್ರೀ ಚಾಂತಾಳ, ಬಾಲಸುಬ್ರಹ್ಮಣ್ಯ ಭಟ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚೆನ್ನಪ್ಪ ನಾಯ್ಕ, ಸಿಬ್ಬಂದಿಗಳಾದ ಲೀಲಾವತಿ ಬೊಳಿಯಾನ, ನವ್ಯ ನಡುಗಲ್ಲು, ವಸಂತ ಕೊರಂಬಟ, ಮಮತಾ ಚಾರ್ಮತ, ಆಶಿಶ್ ಕೂಜುಗೋಡು, ಬಂಗ್ಲೆಗುಡ್ಡೆ ಶಾಲೆಯ ಮುಖ್ಯೋಪಾಧ್ಯಾಯರಾದ ಕಮಲ, ಅಂಗನವಾಡಿ ಕಾರ್ಯಕರ್ತೆ ಪವಿತ್ರ ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಿ.ಡಿ.ಓ ಚೆನ್ನಪ್ಪ ನಾಯ್ಕ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading