Ad Widget

ಮೇದಿನಡ್ಕ :  ಸ್ವಾತಂತ್ರ್ಯ ಆಚರಣೆ – ಸನ್ಮಾನ

ಅಜ್ಜಾವರ: ಮೇದಿನಡ್ಕದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಆಡಳಿತ ಸಮಿತಿ ಹಾಗೂ ಮುತ್ತುಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ 79 ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ ಅಂಗನವಾಡಿ ಕೇಂದ್ರ ವಠಾರದಲ್ಲಿ ನಡೆಯಿತು. ಧ್ವಜಾರೋಹಣವನ್ನು ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ.ಅವಿನಾಶ್ ನೆರವೇರಿಸಿದರು

. . . . . . . . .

ಈ ಸಂದರ್ಭದಲ್ಲಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ನಾಚಿ ಮುತ್ತು, ವಿಷ್ಣು ಯುವಕಮಂಡಲ ಅಧ್ಯಕ್ಷ ರಂಜಿತ್ ರೈ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯೆ ಶ್ರೀಮತಿ ದಿವ್ಯ ಜಯರಾಮ್, ಅರ್ಚಕರಾದ ಶ್ರೀ ಯೋಗರಾಜ್, ಹಿರಿಯರಾದ ದಯಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗ್ರಾಮೀಣ ಜನತೆಗೆ ವೈದ್ಯಕೀಯ ಸೇವೆಯನ್ನು ಒದಗಿಸುತ್ತಿರುವ ಡಾ.ಅವಿನಾಶ್ ರವರನ್ನು ಮೇದಿನಡ್ಕ ಪರಿಸರದ ನಾಗರಿಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ವಿನೋದ್ ಸ್ವಾಗತಿಸಿ, ವಂದಿಸಿದರು, ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಯುವಕರು, ಸ್ಥಳೀಯ ನಿವಾಸಿಗಳು ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading