Ad Widget

ಸೋಣಂಗೇರಿ : ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶಿಲಾನ್ಯಾಸ

ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ನೂತನ ಶ್ರೀ ಕೃಷ್ಣ ನೂತನ ಭಜನಾ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.18 ರಂದು ನಡೆಯಿತು. ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನೂತನ ಮಂದಿರ ನಿರ್ಮಾಣ ಆಗಲಿದೆ.

. . . . . . . . .

ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಆ.15 ರಿಂದ 18 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಆ.18 ರಂದು ಬೆಳಿಗ್ಗೆ 10:20ರ ತುಲಾ ಲಗ್ನ ಸುಮುಹೂರ್ತದಲ್ಲಿ ನೂತನ ಶ್ರೀಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ಶಿಲಾನ್ಯಾಸ ಭೂಮಿ ಪೂಜನಾ ಕಾರ್ಯಕ್ರಮ ನಡೆಯಿತು. ಜಾಲ್ಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಉದ್ಯಮಿಗಳಾದ ಸುಧಾಕರ ಕಾಮತ್ ವಿನೋಬನಗರ ಶಿಲಾನ್ಯಾಸ ನೆರವೇರಿಸಿದರು.

. . . . . . .

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಗಿರಿಧರ್ ಗೌಡ ನಾಯರ್ ಹಿತ್ಲು ವಹಿಸಲಿದ್ದರು. ಮುಖ್ಯ ಅತಿಥಿಗಳಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಶ್ರೀಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷ ರುಕ್ಕಯ್ಯ ಗೌಡ ಎಸ್. ಎನ್ ನಡುಮನೆ, ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ಬಾಲಕೃಷ್ಣ ಗೌಡ.
ಎನ್. ನಡುಬೆಟ್ಟು, ಸೋಣಂಗೇರಿ ಶ್ರೀ ವಿಷ್ಣುಮೂರ್ತಿ ವಯನಾಟ್ ಕುಲವನ್ ದೈವಸ್ಥಾನದ ಗೌರವಾಧ್ಯಕ್ಷ ಮನ್ಮಥ ಎಸ್.ಎನ್ ನಡುಮನೆ, ಸೋಣಂಗೇರಿ ಶ್ರೀ ಅಯ್ಯಪ್ಪ ದೇವಸ್ಥಾನದ ನಾಗರಾಜ್ ಗುರುಸ್ವಾಮಿ, ಕುಕ್ಕನ್ನೂರು ಬಾಲಮುರುಗನ್ ದೇವಸ್ಥಾನದ ದೇವೇಂದ್ರ ಕುಕ್ಕನ್ನೂರು, ಸೋಣಂಗೇರಿ ಮುತ್ತು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಮಹೇಶ್ವರನ್ ಸೋಣಂಗೇರಿ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಸಾವಿತ್ರಿ ಅಡ್ಯಾರು ಬೈಲು, ಗ್ರಾ.ಪಂ.ಸದಸ್ಯರಾದ ಈಶ್ವರ ನಾಯ್ಕ ಸೋಣಂಗೇರಿ, ಶ್ರೀಮತಿ ಅಂಬಿಕಾ ಕುಕ್ಕನ್ನೂರು, ರವೀಂದ್ರನಾಥ್ ಎಸ್. ಎನ್ ನಡುಮನೆ ಸೋಣಂಗೇರಿ, ನೋಟರಿ ವಕೀಲರಾದ ದೇವಿಪ್ರಸಾದ್ ಆಳ್ವ ಸೋಣಂಗೇರಿ, ನಿವೃತ್ತ ಯೋಧ ಬಾಲಚಂದ್ರ ಎಸ್.ಕೆ ಕೆಳಗಿನಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಮೂರ್ತಿ ಪುರೋಹಿತ ನಾಗರಾಜ ಭಟ್ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ವೆಂಕಟ್ ವಳಲಂಬೆ, ಸುಪ್ರೀತ್ ಮೋಂಟಡ್ಕ ಮತ್ತಿತರರು ಉಪಸ್ಥಿತರಿದ್ದರು. ಶ್ರೀಕೃಷ್ಣ ಭಜನಾ ಮಂದಿರದ ಸಂಚಾಲಕ ಸತ್ಯಶಾಂತಿ ತ್ಯಾಗ ಮೂರ್ತಿ, ಕಾರ್ಯದರ್ಶಿ ನಿರಂಜನ ಮಿತ್ತಬೈಲು, ಕೋಶಾಧಿಕಾರಿ ಲೀಲಾವತಿ ನಡುಮನೆ, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸತ್ಯಶಾಂತಿ ತ್ಯಾಗ ಮೂರ್ತಿ ಸ್ವಾಗತಿಸಿ, ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading