Ad Widget

ಬಳ್ಪ : ಆ.31 ರಂದು ಉಚಿತ ವೈದ್ಯಕೀಯ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಬಳ್ಪ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ, ವಿಕ್ರಮ ಯುವಕ ಮಂಡಲ ಬಳ್ಪ, ಧರ್ಮಶಾಸ್ತಾವೂ ಭಜನಾ ಮಂಡಳಿ ಬಳ್ಪ ಇವುಗಳ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಆ.31 ರಂದು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9:30 ರಿಂದ “ಉಚಿತ ವೈದ್ಯಕೀಯ ಶಿಬಿರ” ನಡೆಯಲಿದ್ದು, ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್.ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಊರಿನ ಹಿರಿಯರಾದ ಪುಟ್ಟಣ್ಣ ಗೌಡ ಪಟೇಲ್ ಎಣ್ಣೆಮಜಲು ರವರು ಶಿಬಿರವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಆಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ ನ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ ಚಿದಾನಂದ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ಗೌರವ ಉಪಸ್ಥಿತರಾಗಿ ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರ್ಷಿತ್ ಕಾರ್ಜ, ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಶ್ರೀಮತಿ ವಿಮಲಾ ರಂಗಯ್ಯ, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕ್ಲಬ್ ನ ಅಧ್ಯಕ್ಷರಾದ ಎಚ್.ಎಲ್ ವೆಂಕಟೇಶ್, ಬಳ್ಪ ವಿಕ್ರಮ ಯುವಕ ಮಂಡಲದ ಅಧ್ಯಕ್ಷರಾದ ಸುರೇಶ್ ಅಲ್ಕಬೆ, ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮೇಶ್ ಬುಡಂಗಿ, ಬಳ್ಪ ಧರ್ಮಶಾಸ್ತಾವೂ ಭಜನಾ ಮಂಡಳಿಯ ಅಧ್ಯಕ್ಷರಾದ ಮುರಳೀಧರ ಜತ್ತಿಲ ಉಪಸ್ಥಿತರಿರಲಿದ್ದಾರೆ.
ಉಚಿತ ವೈದ್ಯಕೀಯ ಶಿಬಿರದಲ್ಲಿ ವಿವಿಧ ವಿಭಾಗಗಳ ವೈದ್ಯರುಗಳು ಇರಲಿದ್ದು, ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading