Ad Widget

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ಸುಳ್ಯ ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮ

ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ.) (ಎನ್.ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ‌.ಜಿ ಪಾಲಿಟೆಕ್ನಿಕ್ ಸುಳ್ಯ) ಇದರ ವತಿಯಿಂದ  ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ  ಸಭೆಯನ್ನು  ಅರಂಬೂರಿನ “ವಿಕಸನ” ಮನೆಯಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ
ಸಂಘದ ಗೌರವಾಧ್ಯಕ್ಷರು, ಕೆ.ವಿ.ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ
ಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರರುಗಳಾದ  ಕೆ.ವಿ.ಜಿ ಪಾಲಿಟೆಕ್ನಿಕ್ ನ  ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ್.ಸಿ ಬಿಳಿನೆಲೆ,  ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ಎನ್.ಎಂ.ಸಿಯ ಸಹಾಯಕ ಪ್ರಾಧ್ಯಾಪಕರಾದ
ಡಾ| ಅನುರಾಧಾ ಕುರುಂಜಿ ಇವರುಗಳನ್ನು ಗೌರವಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಆಚರಿಸಲಾಯಿತು. 
ಪ್ರಸ್ತುತ ವರ್ಷ ಸಂಘವು ದಶಮಾನೋತ್ಸವವನ್ನು ಆಚರಿಸುತ್ತಿದ್ದು, ಸಂಘದ ಪ್ರಥಮ ತೈಮಾಸಿಕ ಸಭೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮದ  ರೂಪುರೇಷೆಗಳನ್ನು ಚರ್ಚಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ಕಾರ್ಯಕಾರಿ ಅಧ್ಯಕ್ಷರಾದ ರಕ್ಷಿತ್ ಬೊಳ್ಳೂರು, ಸಂಘಟನಾ ಕಾರ್ಯದರ್ಶಿ ಸುಜಿತ್.ಎಂ.ಎಸ್, ಕಾರ್ಯದರ್ಶಿ ಸುಶಾಂತ್ ಅಜ್ಜಿಕಲ್ಲು, ಯಶವಂತ, ಯೂರೇಶ್ ಕೊಪ್ಪಡ್ಕ, ಪೂರ್ಣಿಮ ಚೊಕ್ಕಾಡಿ,  ಲೋಹಿತ್ ರೆಂಜಾಳ, ಚರಿತ್ ರೈ, ಅಚಲ್ ಬಿಳಿನೆಲೆ, ಅಂಶಲ್ ಬಿಳಿನೆಲೆ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading