Ad Widget

ಗಾಂಧಿನಗರ : ಕೆ.ಪಿ.ಎಸ್ ನಲ್ಲಿ ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್ಬಾಲ್ ಪಂದ್ಯಾಟದ ಉದ್ಘಾಟನೆ

ಸುಳ್ಯ : ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ  ತಾಲ್ಲೂಕು ಮಟ್ಟದ ಕಾಲೇಜು ವಿಭಾಗದ ಪುಟ್ಬಾಲ್ ಪಂದ್ಯಾಟದ ಉದ್ಘಾಟನೆ ಆ.20 ರಂದು ನಡೆಯಿತು. 
ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದಿರೆ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ನಗರ ಪಂಚಾಯತ್ ಸದಸ್ಯರಾದ ವೆಂಕಪ್ಪ ಗೌಡ, ಕೆ.ಪಿ.ಎಸ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ, ಚಿದಾನಂದ, ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾಜಿ ಕಾರ್ಯಧ್ಯಕ್ಷರಾದ ಪ್ರವೀಣ್ ನಾಯಕ್, ಮಾಜಿ ಅಧ್ಯಕ್ಷರಾದ ಆರ್.ಕೆ.ಮೊಹಮ್ಮದ್, ಪ್ರಾಂಶುಪಾಲರಾದ ಪರಮೇಶ್ವರಿ, ಉಪಪ್ರಾಂಶುಪಾಲರಾದ ಜ್ಯೋತಿ ಲಕ್ಷ್ಮಿ ಮತ್ತು ಇತರ ಕೆ.ಪಿ.ಎಸ್ ಸದಸ್ಯರು ವೇದಿಕೆಯಲ್ಲಿ ಇದ್ದರು.
ಪ್ರಾಂಶುಪಾಲರಾದ ಪರಮೇಶ್ವರಿ ಸ್ವಾಗತಿಸಿ, ಉಪನ್ಯಾಸಕರಾದ ರಾಜೇಶ್ ವಂದಿಸಿದರು.
ತಾಲ್ಲೂಕಿನ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading