Ad Widget

ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂಬುಲೆನ್ಸ್ ಚಾಲಕ ಹನೀಫ್ ಹಾಗೂ ಕೆನರಾ ಬ್ಯಾಂಕ್ ಉದ್ಯೋಗಿ ಶ್ರೀಮತಿ ಸೀತಾ ಅವರಿಗೆ ಸನ್ಮಾನ

ಜಯನಗರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಜೀವ ರಕ್ಷಕ ಅಂಬುಲೆನ್ಸ್ ಚಾಲಕ ಹನೀಫ್ ಅವರನ್ನು ಬೆಂಗಳೂರಿನ ದೃಷ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ಹನೀಫ್ ಅವರು ಹಲವಾರು ಸಂದರ್ಭಗಳಲ್ಲಿ ತುರ್ತು ಸೇವೆಗಾಗಿ ಜೀವ ಹಂಗು ತೊರೆದು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದರು. ಹಾಗೂ ಕೆನರಾ ಬ್ಯಾಂಕ್ ಸುಳ್ಯದಲ್ಲಿ ಉದ್ಯೋಗಿಯಾಗಿ ಬ್ಯಾಂಕ್ ಗೆ ಬರುವ ಗ್ರಾಹಕರಿಗೆ ಸಲಹೆ ಸೂಚನೆಗಳನ್ನು ನೀಡಿ ಅವರ ಕೆಲಸಗಳನ್ನು ಬಹಳ ಪ್ರಾಮಾಣಿಕವಾಗಿ ನೆರವೇರಿಸಿ ಕೊಟ್ಟು ಉಳಿದ ಅಧಿಕಾರಿಗಳಿಗೆ ಮಾದರಿಯಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಶ್ರೀಮತಿ ಸೀತಾ ರಾಜಶೇಖರ್ ಬಂಗ್ಲೆಗುಡ್ಡೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ನಗರ ಪಂಚಾಯತ ಸದಸ್ಯ ಬಾಲಕೃಷ್ಣ ಭಟ್ ಕೊಡಂಕಿರಿ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಊರವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading