Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರವಾಗಿ ಮುಂದುವರಿದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಆಗಸ್ಟ್ 24 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನವರು ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನವರ ಸಹಯೋಗದೊಂದಿಗೆ ನಿರಂತರವಾಗಿ ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿದ್ದು, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ ಪಕ್ಕದ ಪರಿಸರದಲ್ಲಿ, ಮಾರ್ಗದ ಬದಿ, ವಾಹನ ಪಾರ್ಕಿಂಗ್ ಬಳಿ, ಶೌಚಾಲಯದ ಬಳಿ, ಹಾಗೂ ಇನ್ನಿತರ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಚೀಲಗಳು, ಪ್ಲಾಸ್ಟಿಕ್ ಬಾಟಲ್ ಗಳು, ಕಸ ಕಡ್ಡಿ ಹಾಗೂ ಇನ್ನಿತರ ಪ್ಲಾಸ್ಟಿಕ್ ಗೆ ಸಂಬಂಧಿಸಿದ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನ ಮನಗಂಡ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಕುಕ್ಕೆಶ್ರೀ ಸೀನಿಯರ್ ಚೇಂಬರ್ ನವರು  ಜಂಟಿಯಾಗಿ ಪ್ರತಿ ಭಾನುವಾರದಂತೆ ಆ.24 ಭಾನುವಾರದಂದು ಕುಮಾರ ಧಾರೆಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ತನಕ ರಸ್ತೆ ಬದಿ ಬಿದ್ದಿರುವ ಎಲ್ಲಾ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಒಟ್ಟುಗೂಡಿಸಿ ಕಸ ವಿಲೇವಾರಿ ಗೆ ಕಳುಹಿಸಿದರು.
ಈ ಸೇವಾ ಕಾರ್ಯದಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸುಮಾರು 50ರಿಂದ 60 ಸ್ವಯಂಸೇವಕರು ಸೇವೆಯನ್ನು ಸಲ್ಲಿಸಿದ್ದಾರೆ.
ಶ್ರೀ ದೇವಳದ ಸಮೀಪ ಸ್ವಚ್ಛತಾ ಕಾರ್ಯ ಮಾಡುತ್ತಿದ್ದಾಗ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ರವರು ಬಂದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಶ್ಲಾಘನೆಯ ನುಡಿಗಳೊಂದಿಗೆ  ಮುಂದಿನ ದಿನಗಳಲ್ಲಿ ನಾವು ಕೂಡ ನಿಮ್ಮೊಂದಿಗೆ ಸೇರಿಕೊಳ್ಳುತ್ತೇವೆ ಎಂಬ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯದ ಡಾ.ರವಿ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ.ರವಿ ಕಕ್ಕೆ ಪದವು, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್  ಚೇಂಬರ್ಸ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading