Ad Widget

ಬಿ ಜೆ ಪಿ ಕೊಡಿಯಾಲ ಶಕ್ತಿಕೇಂದ್ರದ ಅಭ್ಯಾಸವರ್ಗ

ಕೊಡಿಯಾಲ ಶಕ್ತಿ ಕೇಂದ್ರ ಅಭ್ಯಾಸ ವರ್ಗ
ಕಲ್ಪಡ ಚಿದಾನಂದ ಉಪಾಧ್ಯರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು
ಕೊಡಿಯಾಲ ಬಿಜೆಪಿ ಹಿರಿಯ ಕಾರ್ಯಕರ್ತ ವೆಂಕಟೇಶ್ ಪೈ ಬಾಚೋಡಿ ನೆರವೇರಿಸಿದರು. ಸುಳ್ಯ ಬಿಜೆಪಿ ಮಂಡಲ ಉಪಾಧ್ಯಕ್ಷ ರಾಮಕೃಷ್ಣ ಭಟ್ ಬೆಳ್ಳಾರೆ ಹಾಗೂ ಬಿಜೆಪಿ ಮಂಡಲ ಕೋಶಾಧಿಕಾರಿ ಶುಭೋದ್ ರೈ ಮೇನಾಲ ಇವರು ಅಭ್ಯಾಸವರ್ಗ ಅವಧಿಯನ್ನು ನಡೆಸಿದರು. ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಸಮಾರೋಪ ಭಾಷಣ ಮಾಡಿದರು. ವೇದಿಕೆಯಲ್ಲಿ ಬೆಳ್ಳಾರೆ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಅನೂಪ್ ಬಿಳಿಮಲೆ, ಕೊಡಿಯಾಲ ಶಕ್ತಿಕೇಂದ್ರ ಪ್ರಮುಖ್ ಚೇತನ್ ಕೊಡಿಯಾಲ, ಬೂತ್ ಅಧ್ಯಕ್ಷರಾದ ಹರೀಶ್ ಆರ್ವಾರ, ಪೂರ್ಣಿಮಾ ಕಲ್ಪಡ, ರಜನಿಶ್ ಸಾರಕರೆ ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಬೆಳ್ಳಾರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜನಾರ್ದನ ಗೌಡ, ವನಿತಾ ಸಾರಕರೆ, ಬೀಯಲು ಬೆರ್ಯ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading