Ad Widget

ಹರಿಹರ ಪಲ್ಲತ್ತಡ್ಕ : ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘದ ಒಕ್ಕೂಟಗಳು, ವಲಯ ಜನಜಾಗೃತಿ ವೇದಿಕೆ, ವಲಯ ಭಜನಾ ಪರಿಷತ್ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಇದರ ವತಿಯಿಂದ ಸುಳ್ಯ ತಾಲೂಕಿನಲ್ಲಿ ನಡೆಯುವ ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಈ ಸಭೆಯಲ್ಲಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ, ಯೋಜನೆಯಿಂದ ಪಲಾನುಭವಿ ಕುಟುಂಬಗಳು ಅಭಿವೃದ್ಧಿ ಹೊಂದಿರುವ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು.
ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು “ಕ್ಷೇತ್ರದ ಹಿನ್ನಲೆ ಬಗ್ಗೆ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ವಿವರಿಸುತ್ತ ಧರ್ಮಸ್ಥಳದ ಪೂಜ್ಯರು 55 ವರ್ಷಗಳಿಂದ ಅಭಯದಾನ, ವಿದ್ಯಾದಾನ, ಅನ್ನದಾನ, ಔಷಧಿದಾನಗಳನ್ನು ನಡೆಸುತ್ತಾ ಬಂದಿದ್ದು, ಆನೇಕ ರೀತಿಯ ಸಮಾಜಸೇವೆಗಳನ್ನು ನೀಡುತ್ತಾ ಬಂದಿದ್ದಾರೆ. ಪೂಜ್ಯರ ಈ ಎಲ್ಲಾ ಸಮಾಜಮುಖಿ ಕಾರ್ಯಗಳು ಇಡೀ ಜಗತ್ಜಾಹಿರಾಗಿದೆ. ಆದರೆ ಇದೀಗ ಸುಮಾರು 13 ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ, ಪೂಜ್ಯರ ಮೇಲೆ ಕೆಲವು ಅಧರ್ಮಿಗಳು ಅವಹೇಳನಕಾರಿ ಮಾಡುತ್ತಾ ಬಂದಿದ್ದು, ಮುಂದಕ್ಕೆ ಇಂತಹ ದುಷ್ಟಶಕ್ತಿಗಳನ್ನು ನಾವು ತಡೆಯದಿದ್ದರೆ ನಮ್ಮ ಹಿಂದೂ ಸಮಾಜಕ್ಕೆ ಕಂಟಕ ಎದುರಾಗುತ್ತದೆ. ಆದ ಕಾರಣ ನಮ್ಮ ಧರ್ಮಕ್ಷೇತ್ರವನ್ನು ಸಂರಕ್ಷಣೆ ಮಾಡುವಂತದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದಕ್ಕಾಗಿ ನಾವೆಲ್ಲರೂ ಪೂಜ್ಯರ ಪರವಾಗಿ, ಕ್ಷೇತ್ರದ ಪರವಾಗಿ ನಿಲ್ಲಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ಕಾರ್ಯದರ್ಶಿಯಾದ ಸತೀಶ್ ಟಿ ಎನ್, ವಲಯ ಭಜನಾ ಪರಿಷತ್ ನ ವಲಯಧ್ಯಕ್ಷರಾದ ಚಂದ್ರಶೇಖರ ಕೊಂದಳ, ವಲಯ ಒಕ್ಕೂಟಗಳ ಎಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಲಯ ಜನಜಾಗೃತಿ ಪದಾಧಿಕಾರಿಗಳು, ಭಜನಾ ಪರಿಷತ್ ನ ಪದಾಧಿಕಾರಿಗಳು, ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳರವರು ಸ್ವಾಗತಿಸಿರು.
ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ.ಕೆ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading